ಬೆಂಗಳೂರು: ಆತ್ಮ ನಿರ್ಭರ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳು ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತವೆ. ಅಲ್ಲದೆ ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸೆ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಮೂಲ ಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ. ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು, ತಮ್ಮ ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ ಎಂದರು.
ಆತ್ಮ ನಿರ್ಭರ ಭಾರತ್ನ ಎರಡನೇ ದಿನದ ಘೋಷಣೆಗಳ ಬಗ್ಗೆ ಸಿಎಂ ಬಿಎಸ್ವೈ ಹೇಳಿದ್ದೇನು?
ಪ್ರಧಾನಿ ಮೋದಿ ಘೋಷಿಸಿರುವ ಆತ್ಮ ನಿರ್ಭರ ಭಾರತ ಅಭಿಯಾನ ಪ್ಯಾಕೇಜ್ ಎರಡನೇ ದಿನದ ಘೋಷಣೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.