ಬೆಂಗಳೂರು: ಲಾಕ್ಡೌನ್ ನಡುವೆಯೂ ಫುಡ್ ಡೆಲಿವರಿಗೆ ಅವಕಾಶ ನೀಡಿರುವುದನ್ನು ದುರ್ಬಳಕೆ ಮಾಡಿಕೊಂಡ ಇಬ್ಬರು ಕಿರಾತಕರು, ಎರಡು ತಲೆಹಾವನ್ನ ಆಹಾರದ ಬಾಕ್ಸ್ನಲ್ಲಿಟ್ಟು ಮಾರಾಟ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಹಮ್ಮದ್ ರಿಜ್ವಾನ್ ಹಾಗೂ ಅಜರ್ ಖಾನ್ ಬಂಧಿತ ಆರೋಪಿಗಳು. ನಗರದ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳು ಎರಡು ತಲೆ ಹಾವನ್ನ ಹಿಡಿದು ಮಾರಾಟ ಮಾಡ್ತಿದ್ದಾರೆಂಬ ಮಾಹಿತಿ ತಿಳಿದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ,ಇಬ್ಬರನ್ನ ಬಂಧಿಸಿದ್ದಾರೆ.
ಆರೋಪಿಗಳಿಬ್ಬರು, dunzo ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಬಂಧಿತರಿಂದ ಎರಡು ತಲೆಹಾವು, ದ್ವಿಚಕ್ರ ವಾಹನ, ಮೊಬೈಲ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.