ETV Bharat / city

ಘನತ್ಯಾಜ್ಯ ವಿಲೇವಾರಿ ಲೋಪ: ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ಕೊಟ್ಟ ಹೈಕೋರ್ಟ್ - High Court to send notice

ನಗರದ ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ಧ ವಿಭಾಗೀಯ ಪೀಠ ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಪೀಠ ಗರಂ ಆಗಿದೆ.

BBMP Commissioner to jail
ಘನತ್ಯಾಜ್ಯ ವಿಲೇವಾರಿ ಲೋಪ: ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುವ ಎಚ್ಚರಿಕೆ ಕೊಟ್ಟ ಹೈಕೋರ್ಟ್
author img

By

Published : Mar 5, 2022, 10:47 PM IST

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ನಗರದ ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಿರುವ ವಿಚಾರವಾಗಿ ಪಾಲಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.

ನಗರದ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ಪಾಲಿಕೆ ನಡವಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪೀಠ, ಬಿಬಿಎಂಪಿ ಅಧಿಕಾರಿಗಳು ಕೋರ್ಟ್ ಆದೇಶಗಳನ್ನು ಉಲ್ಲಂಘಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಕಾನೂನಿಗಿಂತ ಮೇಲಿದ್ದೇವೆ ಎಂದು ಭಾವಿಸಿದ್ದಾರೆ. ಇವರಿಗೆ ಹೈಕೋರ್ಟ್ ಆದೇಶವೆಂದರೆ ಏನು ಎಂಬುದನ್ನು ಅರ್ಥ ಮಾಡಿಸುವ ಸಮಯ ಹತ್ತಿರ ಬಂದಿದೆ. ಬಿಬಿಎಂಪಿ ಸಮಸ್ಯೆಗಳನ್ನು ನೋಡಿ ಸಾಕಾಗಿದೆ. ಈ ಅಧಿಕಾರಿಗಳಿಗೆ ಸರಿಯಾದ ಸಂದೇಶ ರವಾನಿಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, ನ್ಯಾಯಾಲಯದ ಆದೇಶ ಮೀರಿ ಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಿರುವ ಪ್ರಕರಣದಲ್ಲಿ ಕರುಣೆ ತೋರಲು ಸಾಧ್ಯವಿಲ್ಲ. ಯಾವುದೇ ಕಾನೂನು ಇವರನ್ನು ರಕ್ಷಿಸಲು ಸಾಧ್ಯವಿಲ್ಲ. ಬಿಬಿಎಂಪಿ ಆಯುಕ್ತರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಪೀಠ ಆಕ್ರೋಶ ವ್ಯಕ್ತಪಡಿಸಿದೆ. ಈ ವೇಳೆ ಮುಖ್ಯ ಆಯುಕ್ತ ಗೌರವ್ ಗುಪ್ತ ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.

ಒಂದು ಬಾರಿ ಕ್ಷಮಿಸುವಂತೆ ಬಿಬಿಎಂಪಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮನವಿ ಮಾಡಿದರು. ಅದನ್ನು ಪರಿಗಣಿಸಿರುವ ಪೀಠ, ಬಿಬಿಎಂಪಿ ಮುಖ್ಯ ಆಯುಕ್ತರು ತಮ್ಮ ನಡವಳಿಕೆಗೆ ಕಾರಣ ವಿವರಿಸಿ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ:ಕುಗ್ಗುತ್ತಿರುವ ಬಂಡವಾಳ ವೆಚ್ಚದ ಮೇಲಿನ ಖರ್ಚು: ಅಭಿವೃದ್ಧಿ ಕಾಮಗಾರಿಗಳಿಗೆ ಹಣ ವಿನಿಯೋಗ ಕುಂಠಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.