ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ಎಲ್ಲಾ ರಾಜ್ಯಗಳ ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 2.30 ರಿಂದ ಸೋನಿಯಾಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ, ದೇಶದ ಎಲ್ಲಾ ರಾಜ್ಯಗಳ ವಿಪಕ್ಷ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸುತ್ತಿದ್ದಾರೆ.
ಇನ್ನು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಸಹ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.