ಬೆಂಗಳೂರು: ಪಾದರಾಯನಪುರ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದ್ರು ಮುಖರ್ಜಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧಲ್ಲಿ ಮಾತನಾಡಿದ ಅವರು, ನಗರ ಪಶ್ಚಿಮ ವಿಭಾಗ ಹೆಚ್ಚುವರಿ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತದೆ. ಪಾದರಾಯನಪುರ ಘಟನೆ ಬಗ್ಗೆ ಕ್ರಮ ಕೈಗೊಂಡಿದ್ದೇವೆ, ಇನ್ನೂ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಗ್ರೀವಾಜ್ಞೆ ಜಾರಿಯಾದ್ರೆ ಇನ್ನೂ ಕಾನೂನು ಕಠಿಣವಾಗಲಿದೆ. ಸುಗ್ರೀವಾಜ್ಞೆಯಲ್ಲಿ ವೇಳೆ ಸಂಬಂಧಪಟ್ಟ ಸಿಬ್ಬಂದಿಗೆ ತೊಂದರೆ ಮಾಡಿದರೆ ಅವರ ಆಸ್ತಿಮುಟ್ಟುಗೋಲು ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ ಎಂದರು.
ರಂಜಾನ್ ಹಿನ್ನೆಲೆ ಮೆಕ್ಕಾ ಮದೀನಾ ದಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ. ವಕ್ಫ್ ಬೋರ್ಡ್ ಕೂಡ ನಿರ್ದೇಶನ ನೀಡಿದೆ. ಇದನ್ನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇನ್ನು ಸೋಂಕಿತನ ಶವಸಂಸ್ಕಾರದಲ್ಲಿ ಜಮೀರ್ ಅಹ್ಮದ್ ಪಾಲ್ಗೊಂಡ ವಿಚಾರವಾಗಿ ಪ್ರತಿಕ್ರಿಯಿಸಿದ ಬೊಮ್ಮಾಯಿ, ಜಮೀರ್ ಅಹ್ಮದ್ ಅವರನ್ನು ಕ್ವಾರಂಟೈನ್ನಲ್ಲಿ ಇರಿಸಬೇಕಾಗುತ್ತದೆ. ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಅವರ ಮೇಲಿದ್ದು ಅವರನ್ನೂ ಅಗತ್ಯ ಬಿದ್ದರೆ ಕ್ವಾರಂಟೈನ್ನಲ್ಲಿ ಇರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.