ETV Bharat / city

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ.. ಸಿಬಿಐ ಮರು ತನಿಖೆಗೆ ನಿರಾಕರಿಸಿದ ಹೈಕೋರ್ಟ್.. - ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಒತ್ತಾಯ

ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ಆಧಾರದ ಮೇಲೆ ಶೀಘ್ರ ವಿಚಾರಣೆ ಪೂರ್ಣಗೊಳಿಸಬೇಕು. ಈ ಮೂವರು ಅರ್ಜಿದಾರರನ್ನು ಹೆಚ್ಚುವರಿ ಆರೋಪಿಗಳಾಗಿ ಸೇರಿಸಬೇಕಾದರೆ, ಅದಕ್ಕೂ ಮುನ್ನ ಅವರ ವಾದ ಆಲಿಸಿ ಕಾನೂನು ಪ್ರಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ..

High court
ಹೈಕೋರ್ಟ್
author img

By

Published : Jan 27, 2021, 8:50 PM IST

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ಮರು ತನಿಖೆ ನಡೆಸಲು ಸಿಬಿಐಗೆ ನಿರ್ದೇಶಿಸಬೇಕು ಎಂದು ಮೃತಳ ತಂದೆ ಚಂದಪ್ಪಗೌಡ 2018ರಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಸೋಮಶೇಖರ್ ಅವರಿದ್ದ ಪೀಠ ಈ ಆದೇಶ ನೀಡಿದೆ. ಪೀಠ ತನ್ನ ತೀರ್ಪಿನಲ್ಲಿ ಪ್ರಕರಣವನ್ನು ಮೊದಲಿಗೆ ಸಿಐಡಿ ನಂತರ ಸಿಬಿಐ ತನಿಖೆ ನಡೆಸಿದೆ.

ತನಿಖೆಯಲ್ಲಿ ಸಂತೋಷ್ ರಾವ್ ಎಂಬಾತ ಆರೋಪಿಯಾಗಿ ಸಾಬೀತಾಗಿದೆ. ಸಿಬಿಐ ಸಹ ನೂರಾರು ಸಾಕ್ಷ್ಯಧಾರ ಪರಿಗಣಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲೂ ಸಂತೋಷ್ ರಾವ್ ಕೃತ್ಯ ಎಸಗಿರುವುದು ದೃಢಪಟ್ಟಿದೆ.

ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಧೀರಜ್ ಜೈನ್, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ ವಿರುದ್ಧ ಸಂಶಯ ವ್ಯಕ್ತಪಡಿಸಿ ಅರ್ಜಿದಾರರು ಮರು ತನಿಖೆ ಆದೇಶಿಸಲು ಕೋರಿದ್ದಾರೆ. ಆ ಶಂಕೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷ್ಯಧಾರ ಒದಗಿಸಿಲ್ಲ. ಸಿಬಿಐ ತನಿಖೆ ಮುಗಿದಿರುವುದರಿಂದ ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದೆ.

ಇದನ್ನೂ ಓದಿ...ವಿಪತ್ತು ನಿರ್ವಹಣಾ ಕಾಯ್ದೆ ಜಾರಿಗೆ ತರುವಲ್ಲಿ ಹಿಂದೇಟು : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಚಾಟಿ

ಇದೇ ವೇಳೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಧರ್ಮಸ್ಥಳದ ಮಲ್ಲಿಕ್ ಜೈನ್, ಉದಯ ಜೈನ್ ಮತ್ತು ಧೀರಜ್ ಜೈನ್‌ಗೆ ಸೂಚಿಸಿ ಸಿಬಿಐ ವಿಚಾರಣಾ ನ್ಯಾಯಾಲಯ 2016ರಲ್ಲಿ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿದೆ.

ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ಆಧಾರದ ಮೇಲೆ ಶೀಘ್ರ ವಿಚಾರಣೆ ಪೂರ್ಣಗೊಳಿಸಬೇಕು. ಈ ಮೂವರು ಅರ್ಜಿದಾರರನ್ನು ಹೆಚ್ಚುವರಿ ಆರೋಪಿಗಳಾಗಿ ಸೇರಿಸಬೇಕಾದರೆ, ಅದಕ್ಕೂ ಮುನ್ನ ಅವರ ವಾದ ಆಲಿಸಿ ಕಾನೂನು ಪ್ರಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ : ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ, 2012ರ ಅ.9ರಂದು ನಾಪತ್ತೆಯಾಗಿ ಮರುದಿನ ಶವವಾಗಿ ಪತ್ತೆಯಾಗಿದ್ದಳು. ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು.

ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಈ ಮಧ್ಯೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕುಟುಂಬದ ಸದಸ್ಯರ ಹೆಸರು ಕೇಳಿ ಬಂದ ಹಿನ್ನೆಲೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಸಿಬಿಐ ಅಧಿಕಾರಿಗಳು 2016ರಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ದೋಷಾರೋಪ ಪಟ್ಟಿಗೆ ಆಕ್ಷೇಪಿಸಿದ್ದ ಸೌಜನ್ಯಾ ತಂದೆ, ಹೆಚ್ಚಿನ ತನಿಖೆ ನಡೆಸಲು ಕೋರಿದ್ದರು. ಸಿಬಿಐ ಕೋರ್ಟ್ 2017ರಲ್ಲಿ ಹೆಚ್ಚಿನ ತನಿಖೆಗೆ ಆದೇಶಿಸಿ, ಪ್ರಕರಣದ ಸಾಕ್ಷಿಗಳಾದ ಧೀರಜ್ ಜೈನ್, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್‌ಗೆ ಸಮನ್ಸ್ ಜಾರಿ ಮಾಡಿತ್ತು.

ಆ ಆದೇಶ ರದ್ದು ಕೋರಿ ಮೂವರೂ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಸಿಬಿಐ ಕೋರ್ಟ್ ಆದೇಶಕ್ಕೆ 2017ರ ಏ.11ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೇ ವೇಳೆ ಪ್ರಕರಣವನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಮರು ತನಿಖೆ ಕೋರಿ ಸೌಜನ್ಯಾ ತಂದೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.