ETV Bharat / city

ದೇಶದ ಸಂವಿಧಾನ ಭಗವದ್ಗೀತೆಯಷ್ಟೇ ಶ್ರೇಷ್ಠ : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಣ್ಣನೆ - ಸಂವಿಧಾನದ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತು

ಸಂವಿಧಾನ ಸರ್ವರಿಗೂ ಸಮಾನತೆಯ ಅವಕಾಶ ನೀಡಿದೆ. ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದೆ. ಇಂತಹ ಸಂವಿಧಾನದ ಮಹತ್ವದ ಬಗ್ಗೆ ದೇಶದ ಎಲ್ಲಾ ನಾಗರಿಕರಲ್ಲಿ ಅರಿವು ಮೂಡಿಸುವುದು ಸಂವಿಧಾನ ದಿನಾಚರಣೆಯ ಮೂಲ ಉದ್ದೇಶ..

speaker kageri attended constitution day
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Nov 26, 2021, 7:12 PM IST

ಬೆಂಗಳೂರು : ಸನಾತನ ಸಂಸ್ಕೃತಿಯಲ್ಲಿ ಭಗವದ್ಗೀತೆ ಶ್ರೇಷ್ಠ ಧರ್ಮಗ್ರಂಥವೆಂದು ನಾವು ಭಾವಿಸಿದ್ದೇವೆ. ಭಗವದ್ಗೀತೆಯಷ್ಟೇ ನಮ್ಮ ಸಂವಿಧಾನವೂ ಶ್ರೇಷ್ಠವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ನಡೆದ ಸಂವಿಧಾನದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗತ್ತು ಮೆಚ್ಚುವಂತೆ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಜೊತೆಗೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಹಲವು ಮಹನೀಯರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಿದೆ ಎಂದರು.

ಸಂವಿಧಾನ ಸರ್ವರಿಗೂ ಸಮಾನತೆಯ ಅವಕಾಶ ನೀಡಿದೆ. ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದೆ. ಇಂತಹ ಸಂವಿಧಾನದ ಮಹತ್ವದ ಬಗ್ಗೆ ದೇಶದ ಎಲ್ಲಾ ನಾಗರಿಕರಲ್ಲಿ ಅರಿವು ಮೂಡಿಸುವುದು ಸಂವಿಧಾನ ದಿನಾಚರಣೆಯ ಮೂಲ ಉದ್ದೇಶ ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ಮಾತನಾಡಿ, ಸಂವಿಧಾನ ದಿನಾಚರಣೆ ಕೇವಲ ಸಭೆಗೆ ಸೀಮಿತ ಆಗಬಾರದು. 9,10ನೇ ತರಗತಿಯ ಪಠ್ಯಪುಸ್ತಕವಾಗಿ ಬರಬೇಕು. ಸಂವಿಧಾನ ಹಕ್ಕು ಜೊತೆಗೆ ಕರ್ತವ್ಯ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂವಿಧಾನಕ್ಕೆ ಶ್ರೀಮಂತ ಇತಿಹಾಸವಿದೆ : ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದು ನಮ್ಮೆಲ್ಲರಿಗೂ ಅತ್ಯಂತ ಅವಿಸ್ಮರಣೀಯ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನ.

ಹೀಗಾಗಿ, ಇಂದಿನ ದಿನವನ್ನು ದೇಶಾದ್ಯಂತ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂದಿಗೆ ಭಾರತ ಸಂವಿಧಾನವನ್ನು ಅಂಗೀಕರಿಸಿ 72 ವರ್ಷಗಳಾದವು. ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಶ್ರೀಮಂತ ಇತಿಹಾಸ, ಮಹತ್ವವಿದೆ ಎಂದು ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ವಿಧಾನಸಭೆ ಕಾರ್ಯದರ್ಶಿ ಎಂ.ಕೆ.‌ವಿಶಾಲಾಕ್ಷಿ, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.