ಬೆಂಗಳೂರು: ಬಿಡಿಎ ಗೆ ಸಂಬಂಧಪಟ್ಟ ಪ್ರಕರಣಗಳನ್ನು ತುರ್ತಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿರುವ ಹಿನ್ನೆಲೆ ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ವಿಶೇಷ ಅನುಪಾಲನಾ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.
ಈ ಕುರಿತು ಪ್ರಾಧಿಕಾರದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಖುದ್ದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಾ. ವಾಸಂತಿ ಸೇರಿದಂತೆ ಉನ್ನತಾಧಿಕಾರಿಗಳು ಹಾಜರಿದ್ದರು.