ETV Bharat / city

ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ, ಹರಿದು ಬಂದ ಭಕ್ತಸಾಗರ - ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಪೂಜೆ

ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಭಕ್ತ ಸಾಗರ ಹರಿದು ಬಂದಿದೆ..

special pooja in bangalore Ghati Subrahmanya Temple
ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ
author img

By

Published : Feb 6, 2022, 5:27 PM IST

ದೊಡ್ಡಬಳ್ಳಾಪುರ (ಬೆಂಗಳೂರು) : ಕುಮಾರ ಷಷ್ಠಿ ಹಿನ್ನೆಲೆ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಇರುವುದರಿಂದ ಕ್ಷೇತ್ರಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ.

ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹರಿದು ಬಂದ ಭಕ್ತಸಾಗರ

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯ ಕ್ಷೇತ್ರ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದು. ಇಂದು ಕುಮಾರ ಷಷ್ಠಿ ಹಿನ್ನೆಲೆ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಸ್ವಾಮಿ ದರ್ಶನ ಪಡೆಯುವುದರಿಂದ ಸರ್ಪ ದೋಷ ನಿವಾರಣೆಯಾಗುವ ನಂಬಿಕೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳಲ್ಲಿ ಏನೇ ವರದಿಯಾದರೂ ಗೋವಾದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ: ಬಿಎಸ್​ವೈ

ಜನವರಿ ತಿಂಗಳಲ್ಲಿ ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವನ್ನು ಕೋವಿಡ್ ಹಿನ್ನೆಲೆ ದೇವಸ್ಥಾನದ ಪ್ರಾಂಗಣದಲ್ಲಿ ಸರಳವಾಗಿ ನಡೆಸಲಾಗಿತ್ತು. ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ಆದರೆ ಇಂದು ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುವ ಹಿನ್ನೆಲೆ ಕ್ಷೇತ್ರಕ್ಕೆ ಹೆಚ್ಚಿನ ಜನರು ಭೇಟಿ ನೀಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.