ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ವೈದ್ಯೆ ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ವಿಭಾಗದ ಹೈಗ್ರೌಂಡ್ ಪೊಲೀಸರು ಸೌಂದರ್ಯ ತನ್ನ ಕುಟುಂಬದೊಂದಿಗೆ ವಾಸವಿದ್ದ ಶ್ಯಾಂಗ್ರಿಲಾ ಹೋಟೆಲ್ ಪಕ್ಕದಲ್ಲಿರುವ ಅಪಾರ್ಟ್ಮೆಂಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಕೊಠಡಿಯನ್ನು ಮಹಜರು ಮಾಡುವ ಉದ್ದೇಶದಿಂದ ಆಗಮಿಸಿದ ಪೊಲೀಸರು ಮೃತ ಸೌಂದರ್ಯ ಅವರ ಪತಿಗಾಗಿ ಸುಮಾರು ಹೊತ್ತು ಕಾದ ಪ್ರಸಂಗ ನಡೆಯಿತು.
ಇದನ್ನೂ ಓದಿ: ಮಾಜಿ ಸಿಎಂ ಮೊಮ್ಮಗಳ ನಿಧನ; ಬಿಎಸ್‌ವೈ ನಿವಾಸಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ: ಸಾಂತ್ವನ
ಪತಿ ಡಾ. ನೀರಜ್ ಬೆಳಗ್ಗೆಯಿಂದ ಮನೆಯಲ್ಲಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಾಹ್ನದವರೆಗೆ ಅವರಿಗಾಗಿ ಕಾಯಬೇಕಾಯಿತು. ಅವರು ಬಂದ ನಂತರ ಮಹಜರು ಪ್ರಕ್ರಿಯೆ ನಡೆಸಲಾಯಿತು ಎಂದು ತಿಳಿದುಬಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ