ETV Bharat / city

ಜೆಡಿಎಸ್ ತನ್ನ ಸ್ವಾರ್ಥಕ್ಕಾಗಿ ಸರ್ಕಾರವನ್ನು ಬೆಂಬಲಿಸುತ್ತಿದೆ: ಎಸ್.ಆರ್. ಪಾಟೀಲ್ - HD Kumaraswamy

ಜೆಡಿಎಸ್​ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ತಮ್ಮ‌ ಪಕ್ಷದ ತಪ್ಪನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಹಳೆ ಸಾಧನೆಗಳ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಿ ಎಂದು ಹೆಚ್​ಡಿಕೆ ವಿರುದ್ಧ ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಎಸ್.ಆರ್. ಪಾಟೀಲ್, ಹೆಚ್.ಡಿ. ಕುಮಾರಸ್ವಾಮಿ
ಎಸ್.ಆರ್. ಪಾಟೀಲ್, ಹೆಚ್.ಡಿ. ಕುಮಾರಸ್ವಾಮಿ
author img

By

Published : Dec 10, 2020, 9:34 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರ ಹಾಕಿರುವ ಅವರು, ಬಿಜೆಪಿ ಸರ್ಕಾರದ ರೈತ ವಿರೋಧಿ ನೂತನ ಕೃಷಿ ಕಾಯ್ದೆಗೆ ಬೆಂಬಲ ನೀಡಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ಪಕ್ಷದ ಇಬ್ಭಗೆಯ ನೀತಿಯನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ಪಕ್ಷದ ತಪ್ಪನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

  • ಸರ್ಕಾರದ ಈ ರೈತ ವಿರೋಧಿ ನಿರ್ಧಾರವನ್ನು ವಿರೋಧಿಸುವ ಬದಲು ಜೆಡಿಎಸ್ ಪಕ್ಷ ತನ್ನ ಸ್ವಾರ್ಥಕ್ಕಾಗಿ ಬೆಂಬಲಿಸುತ್ತಿದ್ದಾರೆ. ಅಲ್ಲದೆ, ಈ ಮಾರಕ ಕೃಷಿ ಮಸೂದೆಯ ಕುರಿತು ಜನರನ್ನ ದಾರಿ ತಪ್ಪಿಸಲು ಯತ್ನಿಸುತ್ತಿರುವುದು ದುರಂತ.
    ವಿರೋಧ ಪಕ್ಷಗಳು ವಿರೋಧ ಮಾಡುವುದಕ್ಕೆ ಮಾತ್ರವಲ್ಲ. 3/5

    — S R Patil (@srpatilbagalkot) December 9, 2020 " class="align-text-top noRightClick twitterSection" data=" ">

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಕೇಂದ್ರ ಬಿಜೆಪಿ ಸರ್ಕಾರ ಮಾತ್ರ ರೈತ ವಿರೋಧಿ ಮತ್ತು ಜನ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಈ ರೈತ ವಿರೋಧಿ ನಿರ್ಧಾರವನ್ನು ವಿರೋಧಿಸುವ ಬದಲು ಜೆಡಿಎಸ್ ಪಕ್ಷ ತನ್ನ ಸ್ವಾರ್ಥಕ್ಕಾಗಿ ಬೆಂಬಲಿಸುತ್ತಿದೆ. ಅಲ್ಲದೆ, ಈ ಮಾರಕ ಕೃಷಿ ಮಸೂದೆಯ ಕುರಿತು ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿರುವುದು ದುರಂತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಪಕ್ಷಗಳು ವಿರೋಧ ಮಾಡುವುದಕ್ಕೆ ಮಾತ್ರವಲ್ಲ, ತಮ್ಮ ಜವಾಬ್ದಾರಿಗಳನ್ನು ರಚನಾತ್ಮಕವಾಗಿ ನಿರ್ವಹಿಸಬೇಕು ಎಂದು ಹೆಚ್​ಡಿಕೆ ಹೇಳಿದ್ದಾರೆ. ಅದರೆ ಪ್ರತಿಪಕ್ಷಗಳ ಜವಾಬ್ದಾರಿ ಏನು ಎಂಬುದು ಅವರು ಹೇಳುವ ಅಗತ್ಯವಿಲ್ಲ, ಮೊದಲು ಅವರ ಜವಾಬ್ದಾರಿ ಏನು ಎಂಬುದನ್ನು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಹಳೆ ಸಾಧನೆಗಳ ಬಗ್ಗೆ ಬಡಾಯಿ ಕೊಚ್ಚಿ ಕೊಳ್ಳುವುದನ್ನು ನಿಲ್ಲಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಿ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.