ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪನವರು ಧರ್ಮದ ಹೆಸರಿನಲ್ಲಿ ರಾಜ್ಯದಲ್ಲಿ ಕಿಚ್ಚು ಹೊತ್ತಿಸಲು ಮುಂದಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಆರೋಪಿಸಿದ್ದಾರೆ.
-
ಬಿಜೆಪಿ ಸಚಿವರ ಬಾಯಲ್ಲಿ ಇದೆಂಥಾ ಅ'ಧರ್ಮ'ದ ಮಾತು?
— S R Patil (@srpatilbagalkot) November 28, 2020 " class="align-text-top noRightClick twitterSection" data="
ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಅನ್ನು ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಕೊಡ್ತೇವೆ ಆದರೆ ಮುಸ್ಲಿಮರಿಗೆ ಕೊಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ @ikseshwarappa ರವರು ಹೇಳಿಕೆ ನೀಡೋ ಮೂಲಕ 1/3 pic.twitter.com/3hJrtVRORW
">ಬಿಜೆಪಿ ಸಚಿವರ ಬಾಯಲ್ಲಿ ಇದೆಂಥಾ ಅ'ಧರ್ಮ'ದ ಮಾತು?
— S R Patil (@srpatilbagalkot) November 28, 2020
ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಅನ್ನು ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಕೊಡ್ತೇವೆ ಆದರೆ ಮುಸ್ಲಿಮರಿಗೆ ಕೊಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ @ikseshwarappa ರವರು ಹೇಳಿಕೆ ನೀಡೋ ಮೂಲಕ 1/3 pic.twitter.com/3hJrtVRORWಬಿಜೆಪಿ ಸಚಿವರ ಬಾಯಲ್ಲಿ ಇದೆಂಥಾ ಅ'ಧರ್ಮ'ದ ಮಾತು?
— S R Patil (@srpatilbagalkot) November 28, 2020
ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಅನ್ನು ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಕೊಡ್ತೇವೆ ಆದರೆ ಮುಸ್ಲಿಮರಿಗೆ ಕೊಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ @ikseshwarappa ರವರು ಹೇಳಿಕೆ ನೀಡೋ ಮೂಲಕ 1/3 pic.twitter.com/3hJrtVRORW
ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಮುಸ್ಲಿಮರಿಗೆ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಎಸ್.ಆರ್ ಪಾಟೀಲ್, ಬಿಜೆಪಿ ಸಚಿವರ ಬಾಯಿಯಲ್ಲಿ ಇದೆಂಥಾ ಅ'ಧರ್ಮ'ದ ಮಾತು?. ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಅನ್ನು ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಕೊಡ್ತೇವೆ. ಆದರೆ ಮುಸ್ಲಿಮರಿಗೆ ಕೊಡಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಅ'ಧರ್ಮ'ದ ಕಿಚ್ಚು ಹೊತ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಲೋಕಸಭಾ ಟಿಕೆಟ್‌ನ ಹಿಂದುತ್ವವಾದಿಗೇ ಕೊಡ್ತೀವಿ.. ಸಚಿವ ಕೆ ಎಸ್ ಈಶ್ವರಪ್ಪ
ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ನಾಲಿಗೆಯನ್ನು ಹರಿಬಿಟ್ಟಿರುವುದು ಎಷ್ಟು ಸರಿ?, ಇದೇನಾ ನಿಮ್ಮ ಪಕ್ಷದ ಶಿಸ್ತು?, ಜಾತಿ ರಾಜಕಾರಣದ ಬೆನ್ನಲ್ಲೇ ಸಚಿವ ಈಶ್ವರಪ್ಪನವರು ಧರ್ಮವನ್ನು ಎಳೆದು ತಂದಿರುವುದು ದುರಾದೃಷ್ಟಕರ ಸಂಗತಿ ಎಂದು ಕಿಡಿಕಾರಿದ್ದಾರೆ.