ಬೆಂಗಳೂರು: ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದಾಗಿ 23ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆಯನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ತೀವ್ರವಾಗಿ ಖಂಡಿಸಿದ್ದಾರೆ.
-
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆ್ಯಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 20 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿರುವ ಸುದ್ದಿ ನಿಜಕ್ಕೂ ಆಘಾತಕಾರಿ. ಆ್ಯಕ್ಸಿಜನ್ ಸಿಗದೇ ಸತ್ತ ಕೊರೊನಾ ಸೋಂಕಿತರ ಸಾವು ಕೇವಲ ಸಾವಲ್ಲ, ಸರ್ಕಾರೀ ಪ್ರಾಯೋಜಿತ ಕೊಲೆ.1/5
— S R Patil (@srpatilbagalkot) May 3, 2021 " class="align-text-top noRightClick twitterSection" data="
">ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆ್ಯಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 20 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿರುವ ಸುದ್ದಿ ನಿಜಕ್ಕೂ ಆಘಾತಕಾರಿ. ಆ್ಯಕ್ಸಿಜನ್ ಸಿಗದೇ ಸತ್ತ ಕೊರೊನಾ ಸೋಂಕಿತರ ಸಾವು ಕೇವಲ ಸಾವಲ್ಲ, ಸರ್ಕಾರೀ ಪ್ರಾಯೋಜಿತ ಕೊಲೆ.1/5
— S R Patil (@srpatilbagalkot) May 3, 2021ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆ್ಯಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 20 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿರುವ ಸುದ್ದಿ ನಿಜಕ್ಕೂ ಆಘಾತಕಾರಿ. ಆ್ಯಕ್ಸಿಜನ್ ಸಿಗದೇ ಸತ್ತ ಕೊರೊನಾ ಸೋಂಕಿತರ ಸಾವು ಕೇವಲ ಸಾವಲ್ಲ, ಸರ್ಕಾರೀ ಪ್ರಾಯೋಜಿತ ಕೊಲೆ.1/5
— S R Patil (@srpatilbagalkot) May 3, 2021
ಈ ಕುರಿತು ಟ್ವೀಟ್ ಮಾಡಿರುವ ಅವರು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 20ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಮೃತಪಟ್ಟಿರುವ ಸುದ್ದಿ ನಿಜಕ್ಕೂ ಆಘಾತಕಾರಿ. ಆಕ್ಸಿಜನ್ ಸಿಗದೇ ಮೃತಪಟ್ಟ ಕೊರೊನಾ ಸೋಂಕಿತರ ಸಾವು ಕೇವಲ ಸಾವಲ್ಲ, ಸರ್ಕಾರಿ ಪ್ರಾಯೋಜಿತ ಕೊಲೆ. 20ಕ್ಕೂ ಹೆಚ್ಚು ಸೋಂಕಿತರನ್ನು ಸರ್ಕಾರವೇ ಆಕ್ಸಿಜನ್ ಕೊಡದೆ ಕತ್ತು ಹಿಸುಕಿ ಕೊಂದಿದೆ. ಇದು ಸರ್ಕಾರದಿಂದಲೇ ನಡೆದಿರುವ ಸಾಮೂಹಿಕ ಮಾರಣಹೋಮ. ಸರ್ಕಾರ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದ್ದರ ಪರಿಣಾಮ ಇದು. ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರೇ ನಿಮ್ಮ ಸರ್ಕಾರಕ್ಕೆ ಇನ್ನೆಷ್ಟು ಬಲಿ ಬೇಕು? ಎಂದು ಕೇಳಿದ್ದಾರೆ.
ಕಳೆದ 3 ದಿನದಿಂದ ಪೂರೈಕೆಯಾಗ್ತಿದ್ದ ಆಕ್ಸಿಜನ್ ಇದ್ದಕ್ಕಿದ್ದಂತೆ ನಿನ್ನೆಯಿಂದ ಸ್ಥಗಿತವಾಗಿದ್ದು ಯಾಕೆ..? ಜಿಲ್ಲಾಡಳಿತಕ್ಕೆ ಆಕ್ಸಿಜನ್ ಸಮಸ್ಯೆ ಮೊದಲೇ ಗೊತ್ತಿರಲಿಲ್ವಾ? ಜಿಲ್ಲಾಡಳಿತದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ. ಚಾಮರಾಜನಗರಲ್ಲಿ 20ಕ್ಕೂ ಹೆಚ್ಚು ಜನರ ಸಾವಿಗೆ ಬಿಜೆಪಿ ಸರ್ಕಾರವೇ ಹೊಣೆ. ಈ ಸರ್ಕಾರಕ್ಕೆ ಕಿಂಚಿತ್ತಾದರೂ ಪಾಪ ಪ್ರಜ್ಞೆ ಇಲ್ಲ. ನಿನ್ನೆ ರಾತ್ರಿ 8 ಗಂಟೆಗೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿದೆ. 4 ದಿನಗಳ ಹಿಂದಷ್ಟೇ ಕೊಟ್ಯಂತರ ರೂಪಾಯಿ ಖರ್ಚು ಮಾಡಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗಿತ್ತು. ಇಷ್ಟಾದರೂ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ನೀಡಲಾಗಲಿಲ್ಲ ಯಾಕೆ..? ಈ ನಿರ್ಲಕ್ಷ್ಯಕ್ಕೆ ಕಾರಣವಾದವರ ತಲೆದಂಡ ಆಗಲೇಬೇಕು. ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದಿದ್ದಾರೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ ಅಗತ್ಯ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ : ಸಂಸದ ಪ್ರತಾಪ್ ಸಿಂಹ