ಬೆಂಗಳೂರು: ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.
ಈ ಬಾರಿ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಗಂಡು ಮಕ್ಕಳು 4,52,732 ಹಾಗೂ 4,21,110 ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. 5,307 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯಾದ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ಹಾಗೂ kseeb.Karnataka. gov.in ನಲ್ಲಿಯೂ ವೀಕ್ಷಿಸಬಹುದು.
ಇದನ್ನೂ ಓದಿ: ಉ.ಕ ಜಿಲ್ಲೆಯಲ್ಲಿ ಬಿರುಗಾಳಿಗೆ ಹಾರಿದ ಮನೆಗಳ ಚಾವಣಿ, ವಿದ್ಯುತ್ ಕಂಬ ಧರೆಗೆ