ಬೆಂಗಳೂರು: ಮಾರ್ಚ್-ಏಪ್ರಿಲ್ 2019ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 21 ರಿಂದ 28 ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನ ಮೇ 2 ರಿಂದ 13 ರವರಗೆ ಪಡೆಯಬಹುದಾಗಿದೆ.
ಮರುಮೌಲ್ಯಮಾಪನಕ್ಕೆ ಮೇ 6 ರಿಂದ 17ರವರೆಗೆ ಅರ್ಜಿ ಸಲ್ಲಿಸಬಹುದು.
ಛಾಯಾಪ್ರತಿ (ಫೋಟೋಕಾಪಿ) ಒಂದು ವಿಷಯಕ್ಕೆ 405 ರೂಪಾಯಿ, ಮರುಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 805 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.