ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವಂತೆ ಹಾಸ್ಯ ಭಾಷಣಗಳನ್ನು ಮಾಡಿದ್ದ ಗಂಭೀರ ಆರೋಪದಡಿ ಮಧ್ಯಪ್ರದೇಶದ ಇಂದೋರ್ನಲ್ಲಿ ಬಂಧಿಸಲ್ಪಟ್ಟಿದ್ದ ಮುನಾವರ್ ಫಾರೂಕಿಯ ಕಾರ್ಯಕ್ರಮವನ್ನು ರದ್ದುಗೊಳಿಸಲು ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ಪತ್ರ ಬರೆದಿದ್ದಾರೆ.
ಬೆಂಗಳೂರಿನ ಗುಡ್ ಶೆಫರ್ಡ್ ಆಡಿಟೋರಿಯಂನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಮುನಾವರ್ ಫಾರೂಕಿಯ ಸ್ಟ್ಯಾಂಡ್ ಅಪ್ ಕಾಮಿಡಿ ಶೋ ರದ್ದುಗೊಳಿಸುವಂತೆ ಕಾರ್ಯಕ್ರಮದ ಆಯೋಜಕರಿಗೆ ಅಶೋಕನಗರ ಪೊಲೀಸರು ಪತ್ರ ಬರೆದಿದ್ದಾರೆ.
![stand up comedian Munawar Faruqui show canceled in Bengaluru](https://etvbharatimages.akamaized.net/etvbharat/prod-images/kn-bng-02-ashokanagara-case-7202806_28112021125606_2811f_1638084366_152.jpg)
ಭಾನುವಾರ ಸಂಜೆ ಆಯೋಜನೆಗೊಂಡಿದ್ದ ಕಾಮಿಡಿ ಶೋನ 600 ಟಿಕೆಟ್‌ಗಳು ಬುಕ್ ಆಗಿದ್ದು, ಕಾರ್ಯಕ್ರಮ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ಮನವಿ ಮಾಡಿತ್ತು. ಹಿಂದೂಪರ ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶೋ ರದ್ದುಗೊಳಿಸುವಂತೆ ಆಯೋಜಕರಿಗೆ ಪೊಲೀಸರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ''MeToo'' ಕೇಸ್ನಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್?.. ಶ್ರುತಿ ಹರಿಹರನ್ಗೆ ನೋಟಿಸ್!