ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ಆರಂಭಗೊಂಡಿದ್ದು, ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಷಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಾಲ್ಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ನಿತರಾಗಿರುವ ಸಚಿವ ಅರವಿಂದ ಲಿಂಬಾವಳಿ, ಕಂದಾಯ ಇಲಾಖೆ ಕಾರ್ಯಕ್ರಮ ನಿಮಿತ್ತ ಗ್ರಾಮ ವಾಸ್ತವ್ಯಕ್ಕೆ ತೆರಳಿರುವ ಅಶೋಕ್, ಕೆ.ಎಸ್. ಈಶ್ವರಪ್ಪ, ಸಿಎಂ ಉದಾಸಿ ಕೋರ್ ಕಮಿಟಿಗೆ ಗೈರಾಗಿದ್ದಾರೆ.
ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಹಿನ್ನೆಲೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳಿಸಿಕೊಡಲಾಗುತ್ತದೆ.