ETV Bharat / city

ಇಂದಿನಿಂದ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್ ಆರಂಭ - ಆನ್​ಲೈನ್ ತರಗತಿ

ಆನ್​ಲೈನ್ ಪಾಠದ ಜೊತೆಗೆ ಆಡಳಿತಾತ್ಮಕ ಚಟುವಟಿಕೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯುಜಿಸಿ ಮಾರ್ಗಸೂಚಿಯಂತೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಉಳಿದ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿ ಆರಂಭವಾಗಿದೆ..

starting-online-class-for-graduate-students-from-today
ಆನ್​ಲೈನ್ ಕ್ಲಾಸ್
author img

By

Published : Sep 1, 2020, 7:15 PM IST

ಬೆಂಗಳೂರು : ಕೊರೊನಾ ಭೀತಿಗೆ ಶಾಲಾ-ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಆದಕ್ಕಾಗಿ ಆನ್​ಲೈನ್ ತರಗತಿ ನಡೆಸಲು ಸರ್ಕಾರ ಅನುಮತಿ ನೀಡಿದ್ದು, ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ಮೂಲಕ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭಗೊಂಡಿದೆ.

ಪ್ರಥಮ, ದ್ವಿತೀಯ ಹಾಗೂ ತೃತೀಯ ಪದವಿ ತರಗತಿಗಳಿಗೆ ಆನ್​ಲೈನ್ ತರಗತಿ ಆರಂಭವಾಗಿದೆ. ಅಕ್ಟೋಬರ್ 1ರಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭವಾಗಲಿದೆ. ಆನ್​ಲೈನ್ ಪಾಠದ ಜೊತೆಗೆ ಆಡಳಿತಾತ್ಮಕ ಚಟುವಟಿಕೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯುಜಿಸಿ ಮಾರ್ಗಸೂಚಿಯಂತೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಉಳಿದ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿ ಆರಂಭವಾಗಿದೆ.

ಜೆಇಇ ಪರೀಕ್ಷೆ ಶುರು: ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಇಂದಿನಿಂದ ಆರಂಭಗೊಂಡಿದೆ. ಪರೀಕ್ಷೆಗೆ ದೇಶದಾದ್ಯಂತ 8.58 ಲಕ್ಷ ವಿದ್ಯಾರ್ಥಿಗಳು ನೋಂದಾವಣಿ ಮಾಡಿಕೊಂಡಿದ್ದಾರೆ.

ಇವತ್ತಿನಿಂದ ಸೆಪ್ಟೆಂಬರ್ 6ರವರೆಗೆ ಪರೀಕ್ಷೆ ನಡೆಯಲಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಕೋವಿಡ್​​ ಮಾರ್ಗಸೂಚಿ ಪಾಲನೆಗೆ ಸೂಚಿಸಲಾಗಿದೆ. ಜೊತೆಗೆ ಇದೇ ತಿಂಗಳ 13ರಂದು ನೀಟ್ ಪರೀಕ್ಷೆ ನಡೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.