ETV Bharat / city

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ: ಹೆಚ್​​ಡಿಕೆ ಭರವಸೆ - ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನನೆಗುದಿಗೆ ಬಿದ್ದಿವೆ. ಅವುಗಳನ್ನು ಸರ್ಕಾರ ಈಡೇರಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

State Anganwadi Employees Union appealed to HKD
ಹೆಚ್​​ಡಿಕೆಗೆ ಮನವಿ ಸಲ್ಲಿಸಿದ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು
author img

By

Published : Jan 31, 2022, 11:54 AM IST

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿಯ ಮುಖಂಡರು ಇಂದು ಸಲ್ಲಿಸಿದ ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನನೆಗುದಿಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ 47.37 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸಾವಿನ ದವಡೆಯಿಂದ ಪಾರಾಗಿದ್ದಾರೆ ಎಂದು ಹೆಚ್​ಡಿಕೆ ಹೇಳಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡದೇ ಅವರ ಗೌರವ ಧನ ಹೆಚ್ಚಳ ಮಾಡುವುದರ ಜತೆಗೆ, ಎನ್​ಪಿಎಸ್‌ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ಬಜೆಟ್​​ನಲ್ಲಿ ತೆಗೆದಿರಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿತಿಸಿದರು.

ಸಮಿತಿಯ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮತ್ತಿತರರು ಬಿಡದಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಟೋಯಿಂಗ್, ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಕ್ರಮ: ಸಿಎಂ ಬೊಮ್ಮಾಯಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.