ETV Bharat / city

ರಾಜ್ಯ ಬಜೆಟ್ 2022: ಹುಬ್ಬಳ್ಳಿಗೆ ಸಿಗಲಿದೆಯಾ ಕ್ಯಾನ್ಸರ್ ಆಸ್ಪತ್ರೆ? - ಕ್ಯಾನ್ಸರ್ ಆಸ್ಪತ್ರೆ

ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಾರಿಯ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ಸಿ ರಾಮಚಂದ್ರ ತಿಳಿಸಿದ್ದಾರೆ.

ಡಾ. ಸಿ ರಾಮಚಂದ್ರ
ಡಾ. ಸಿ ರಾಮಚಂದ್ರ
author img

By

Published : Mar 3, 2022, 9:12 AM IST

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು ನಾಳೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಈ ಒತ್ತಡವನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್​ನಲ್ಲಿ ಅನುದಾನ ಘೋಷಿಸುವ ಸಾಧ್ಯತೆ ಇದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ಸಿ ರಾಮಚಂದ್ರ ತಿಳಿಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಈ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡುವ ಸಾಧ್ಯತೆ ಇದೆ. ಕಳೆದ ಬಜೆಟ್​ನಲ್ಲಿ ಮೈಸೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಘೋಷಣೆ ಮಾಡಲಾಗಿತ್ತು. ಈ ವರ್ಷ ಹಣ ಬಿಡುಗಡೆ ಮಾಡಿ ಕಾಮಗಾರಿ ಶುರು ಮಾಡಲು ಸೂಚಿಸಲಾಗಿದೆ. ತುಮಕೂರಿನಲ್ಲಿ ಈಗಾಗಲೇ ಶುರುವಾಗಿದ್ದು, ಶಿವಮೊಗ್ಗದಲ್ಲಿ ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಅಂತ ತಿಳಿಸಿದರು.

ಈ ಬಾರಿಯ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ಸಿ ರಾಮಚಂದ್ರ

ಪ್ರತಿ ಮೆಡಿಕಲ್ ಕಾಲೇಜಿಗೆ ಹೊಂದಿಕೊಂಡಂತೆ ಕ್ಯಾನ್ಸರ್ ವಿಂಗ್ ಇರುವಂತೆ ಸಚಿವರು ಹೇಳಿದ್ದಾರೆ. ಅದರಂತೆ ಕಾರವಾರ, ಬಿಜಾಪುರ, ಹಾಸನ, ಮೈಸೂರು, ಮಂಡ್ಯದಲ್ಲಿ ಕ್ಯಾನ್ಸರ್ ವಿಂಗ್ ಮಾಡಲಾಗುತ್ತದೆ. ಇದರಿಂದ ರೇಡಿಯೋ ಥೆರಪಿ, ಬೇಸಿಕ್ ಟ್ರಿಟ್ಮೆಂಟ್ ಆಯಾ ಜಿಲ್ಲೆಯಲ್ಲೇ ಸುಲಭವಾಗಿ ನಡೆಯಲಿದೆ ಅಂತ ವಿವರಿಸಿದರು.

100 ಎಕರೆ ಜಾಗದಲ್ಲಿ ವೈದ್ಯಕೀಯ ಸಂಶೋಧನಾ ಕೇಂದ್ರ ಸ್ಥಾಪನೆ: 100 ಎಕರೆ ಜಮೀನಿನಲ್ಲಿ ಕ್ಯಾನ್ಸರ್ ಸಂಶೋಧನಾ ಕೇಂದ್ರ ಸ್ಥಾಪನೆ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ಮಾನಸಿಕ ಕೇಂದ್ರವನ್ನ ಒಂದೇ ಕಡೆ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಸಹ ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೊರೊನಾ‌ ಸೋಂಕಿನ ಹಿನ್ನೆಲೆ ಇದು ಸಾಧ್ಯವಾಗಿರಲಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.