ETV Bharat / city

ಇಂದು ಸಂಜೆ ಸಚಿವ ಸಂಪುಟ ಸಭೆ: ಖಾತೆ ಬದಲಾವಣೆ ಬಗ್ಗೆ ಅಸಮಾಧಾನ ಸ್ಫೋಟ? - ವಿಧಾನ ಪರಿಷತ್ ಚುನಾವಣಾ ಸುದ್ದಿ

ಖಾತೆ ಅದಲು ಬದಲಾಗಿರುವ ಕಾರಣದಿಂದ ರಾಜ್ಯ ಸಂಪುಟದಲ್ಲಿ ಅಸಮಾಧಾನ ವ್ಯಕ್ತವಾಗುವ ಸಾಧ್ಯತೆಯಿದ್ದು, ಕ್ಯಾಬಿನೆಟ್​ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

vidhana soudha
ವಿಧಾನಸೌಧ
author img

By

Published : Jan 21, 2021, 12:25 PM IST

ಬೆಂಗಳೂರು : ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ. ಜನವರಿ 28ರಿಂದ ಆರಂಭವಾಗುವ ಜಂಟಿ ಅಧಿವೇಶನ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ. ಅದಕ್ಕಿಂತ ಮುಖ್ಯವಾಗಿ ಖಾತೆ ಅದಲು - ಬದಲು ಮಾಡಿರುವ ಕುರಿತು ಸಚಿವರಲ್ಲಿ ಎದ್ದಿರುವ ಭಿನ್ನಮತ ಸ್ಫೋಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿರೀಕ್ಷಿತ ಖಾತೆಗಳು ಸಿಗದಿರುವುದು ಹಾಗೂ ಕೆಲವರ ಖಾತೆಗಳನ್ನು ಅದಲು - ಬದಲು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅಸಮಾಧಾನಗೊಂಡಿದ್ದು, ಇದರಿಂದ ಭಿನ್ನಮತ ಸ್ಫೋಟಗೊಂಡಿದೆ.

ಜೆ.ಸಿ.ಮಾಧುಸ್ವಾಮಿ ತಮ್ಮ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಬದಲಾಯಿಸಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ.‌ ಅದೇ ರೀತಿ ಸಚಿವ ಡಾ.ಕೆ.ಸುಧಾಕರ್, ಆನಂದ್ ಸಿಂಗ್, ಗೋಪಾಲಯ್ಯ, ನಾರಾಯಣಗೌಡ ಮತ್ತಿತರ ಸಚಿವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು

ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಅಸಮಾಧಾನ ಸ್ಫೋಟವಾಗುವ ನಿರೀಕ್ಷೆ ಇದೆ. ಆದರೆ, ಸಚಿವ ಜೆ.ಸಿ‌ ಮಾಧುಸ್ವಾಮಿ ತಮ್ಮ ಜಿಲ್ಲೆಯಲ್ಲಿ ಕಾರ್ಯಕ್ರಮ ಇರುವುದರಿಂದ ಸಂಪುಟ ಸಭೆಗೆ ಗೈರಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ನಡೆಯಬೇಕಿರುವ ಹಲವು ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಬೇಕಾಗಿದೆ. ಜೊತೆಗೆ ಜಂಟಿ ಅಧಿವೇಶನ ಹಾಗೂ ವಿಧಾನಪರಿಷತ್ ಚುನಾವಣೆ ಹಾಗೂ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರುವ ಸಂಬಂಧ ಚರ್ಚೆ ನಡೆಸಬೇಕಿದೆ. ಹಾಗಾಗಿ, ಇಂದಿನ ಕ್ಯಾಬಿನೆಟ್ ಮಹತ್ವ ಪಡೆದುಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.