ETV Bharat / city

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ! - protest against central government

ಪೆಟ್ರೋಲ್ - ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

State Congress massive protest against central government
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ!
author img

By

Published : Feb 9, 2021, 1:15 PM IST

Updated : Feb 9, 2021, 1:54 PM IST

ಬೆಂಗಳೂರು: ಪೆಟ್ರೋಲ್ - ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಕರೆಕೊಟ್ಟ ಪ್ರತಿಭಟನೆಗೆ ಭಾರಿ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ಕಾರ್ಯಕರ್ತರು ಯಶಸ್ವಿಗೊಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ!

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ರಾಮಲಿಂಗ ರೆಡ್ಡಿ, ಸಲೀಂ ಅಹಮದ್​, ಮಾಜಿ ಸಚಿವ ಕೃಷ್ಣಬೈರೇಗೌಡ, ಎಂ.ಕೃಷ್ಣಪ್ಪ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಕಾರ್ಯಕರ್ತರು, ಸ್ಥಳದಲ್ಲಿಯೇ ಅಡುಗೆ ಮಾಡಿ ಸೇವಿಸುವ ಮೂಲಕ ಪೆಟ್ರೋಲ್ - ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿದರು.

ಈ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ದ್ವಿಚಕ್ರ ವಾಹನವನ್ನು ಚಟ್ಟದ ಮೇಲೆ ಇಟ್ಟು ಮೆರವಣಿಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ತಳ್ಳುಗಾಡಿಗಳಲ್ಲಿ ಗ್ಯಾಸ್ ಸಿಲಿಂಡರ್ ಇರಿಸಿ ಹಾಗೂ ದ್ವಿಚಕ್ರ ವಾಹನದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖವಾಡ ಧರಿಸಿದ ಮಹಿಳೆ ಕೂರಿಸಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದ ಇಕ್ಕಟ್ಟಾದ ಪ್ರದೇಶದಲ್ಲಿ ನೂರಾರು ಮಂದಿ ಕಾರ್ಯಕರ್ತರು ಏಕಕಾಲದಲ್ಲಿ ಸೇರಿದ್ದರಿಂದ, ಕೆಂಪೇಗೌಡ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಏರ್ಪಟ್ಟಿತ್ತು. ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಅಂತಿಮವಾಗಿ ಸ್ಥಳಕ್ಕಾಗಮಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶ್ರೀನಿವಾಸಮೂರ್ತಿ, ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ, ತ್ವರಿತವಾಗಿ ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದರು.

Last Updated : Feb 9, 2021, 1:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.