ETV Bharat / city

ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್​ಲೈನ್​ ಅರ್ಜಿ: ತಪ್ಪು ಮಾಹಿತಿ ಸರಿಪಡಿಸಲು ಎರಡು ದಿನ ಅವಕಾಶ - ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್​ಲೈನ್​ ಅರ್ಜಿ

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿರುವ ಅತಿಥಿ ಉಪನ್ಯಾಸಕರು ಕೆಲವೊಂದು ತಪ್ಪು ಮಾಡಿದ್ದು, ಅದನ್ನ ಸರಿಪಡಿಸಿಕೊಳ್ಳಲು ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್​ಲೈನ್​ ಅರ್ಜಿ

author img

By

Published : Feb 12, 2022, 12:13 AM IST

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಹಾಕುವಾಗ ತಪ್ಪು ಮಾಹಿತಿ ಒದಗಿಸಿದ್ದ ಅಭ್ಯರ್ಥಿಗಳಿಗೆ ಮಾಹಿತಿ ಸರಿಪಡಿಸಿಕೊಳ್ಳಲು ಫೆಬ್ರವರಿ 12 ಮತ್ತು 13ರ ಅವಧಿಯಲ್ಲಿ ಎರಡು ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರದೀಪ್, ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಈಗಾಗಲೇ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಮುಗಿದಿದ್ದು, ಆಯ್ಕೆಯಾಗಿರುವ ಬಹುತೇಕರು ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿದ್ದಾರೆ. ಆದರೆ, ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವದ ವಿವರ, ಸ್ನಾತಕೋತ್ತರ ಪದವಿಯ ಅಂಕಗಳು, ಪಿಎಚ್.ಡಿ ಅಥವಾ ಎಂ.ಫಿಲ್ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದು, ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನ ಅವಕಾಶ ಕೊಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಹಿಜಾಬ್ ವಿವಾದದ ಬಗ್ಗೆ ನಾನೇನು ಪ್ರತಿಕ್ರಿಯಿಸೋಲ್ಲ: ಹೆಚ್‌‌.ಡಿ‌.ದೇವೇಗೌಡ

ಅಭ್ಯರ್ಥಿಗಳು ವಾಸ್ತವ ಮಾಹಿತಿಯನ್ನು ಒದಗಿಸದೆ, ಪುನಃ ತಪ್ಪು ಮಾಡಿದಲ್ಲಿ ಅಂತಹವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.