ETV Bharat / city

ರಾಜ್ಯ ಸರ್ಕಾರದಿಂದ ಉದ್ದಿಮೆದಾರರಿಗೆ ಅಗತ್ಯ ಸಹಕಾರ: ಡಿಸಿಎಂ ಅಶ್ವತ್ಥ್​​​ ನಾರಾಯಣ್​ - ಕೈಗಾರಿಕೋದ್ಯಮಕ್ಕೆ ಸರ್ಕಾರ ಬೆಂಬಲ

ಐಟಿ/ಬಿಟಿ ಸೇರಿದಂತೆ ಯಾವುದೇ ಕೈಗಾರಿಕೆ ಇರಲಿ ಕರ್ನಾಟಕದಷ್ಟು ಉತ್ತಮವಾದ ರಾಜ್ಯ ಮತ್ತೊಂದಿಲ್ಲ. ಕೊರೊನಾದಂತಹ ಮಾರಿಯನ್ನು ಹಿಮ್ಮೆಟ್ಟಿಸಿ ಉದ್ದಿಮೆಗಳನ್ನು ಪುನರುಜ್ಜೀವನಗೊಳಿಸಲು ಉದ್ದಿಮೆದಾರರು ಇಡುತ್ತಿರುವ ಹೆಜ್ಜೆ ಶ್ಲಾಘನೀಯ. ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಫೂರ್ತಿಯಾದ ಕೈಗಾರಿಕೋದ್ಯಮಿಗಳನ್ನು ನಾನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಸಿ.ಎನ್.ಅಶ್ವತ್ಥ್​​ ನಾರಾಯಣ್​​ ಹೇಳಿದರು.

DCM Dr. Ashwathth Narayan
ಡಿಸಿಎಂ ಡಾ.ಅಶ್ವತ್ಥ್​​ ನಾರಾಯಣ್​​​
author img

By

Published : Jun 20, 2020, 7:58 PM IST

ಬೆಂಗಳೂರು: ಮುಂದಿನ 6 ವರ್ಷಗಳಲ್ಲಿ ಕರ್ನಾಟಕವನ್ನು ’ನವ ಕರ್ನಾಟಕ’ವನ್ನಾಗಿ ರೂಪಿಸುವುದೂ ಸೇರಿದಂತೆ ರಾಜ್ಯದ ಜಿಡಿಪಿಯನ್ನು 230 ಬಿಲಿಯನ್ ಡಾಲರ್​​​​​​​ನಿಂದ 500 ಬಿಲಿಯನ್ ಡಾಲರ್​​​​​ಗೆ ಹೆಚ್ಚಿಸುವ ಉದ್ದಿಮೆದಾರರ ಕನಸಿಗೆ ಸರ್ಕಾರ ಸರ್ವ ರೀತಿಯ ಸಹಕಾರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​​ ನಾರಾಯಣ್​​ ಹೇಳಿದರು.

ನಗರದಲ್ಲಿ ಇಂದು 'ಕೋವಿಡ್-19 ನಂತರ ಆರ್ಥಿಕತೆಯ ಪುನರುತ್ಥಾನ ಹಾಗೂ ನವ ಕರ್ನಾಟಕ ನಿರ್ಮಾಣ' ವಿಷಯದ ಕುರಿತು ಅಸೋಚೋಮ್ ಏರ್ಪಡಿಸಿದ್ದ ವೆಬಿನಾರ್​​​​​​ನಲ್ಲಿ ಉದ್ದಿಮೆದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ನಂತರ ಕರ್ನಾಟಕವನ್ನು ಆರ್ಥಿಕವಾಗಿ, ಕೈಗಾರಿಕೀಕರಣವಾಗಿ ಹೊಸದಾಗಿ ಕಟ್ಟಬೇಕಿದೆ ಎಂದರು.

ರಾಜ್ಯದಲ್ಲಿ ಯಾರೇ ಬಂದು ಹೂಡಿಕೆ ಮಾಡಿದರೂ ಮುಕ್ತ ಅವಕಾಶವಿದೆ. ಹೂಡಿಕೆ ನಂತರ ಸರ್ಕಾರದ ಅನುಮತಿ ಕೇಳಿದರೂ ಅಭ್ಯಂತರವಿಲ್ಲ. ಉದ್ಯೋಗಾವಕಾಶ ಸೃಷ್ಟಿಸುವ ಕೈಗಾರಿಕೋದ್ಯಮಕ್ಕೆ ಎಲ್ಲಾ ಸೌಲಭ್ಯ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧ ಎಂದು ಒತ್ತಿ ಹೇಳಿದರು.

ರಾಜ್ಯವನ್ನು ಕೋವಿಡ್ ತುಂಬಾ ಬಾಧಿಸಿದೆ. ಸಾಮಾಜಿಕ, ಆರ್ಥಿಕ, ಕೈಗಾರಿಕೆ ಸೇರಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅನೇಕ ಬದಲಾವಣೆಗಳಿಗೆ ಕಾರಣವಾಗಿದೆ. ಹೊಸ ಹೊಸ ಸವಾಲುಗಳು ಎದುರಾಗಿವೆ. ಇವೆಲ್ಲವನ್ನು ಸಮರ್ಥವಾಗಿ ಎದುರಿಸಲು ಸರ್ಕಾರಕ್ಕೆ ಉದ್ದಿಮೆದಾರರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.

State GDP 500 billion target in next six years
ವೆಬಿನಾರ್​​​​​​ನಲ್ಲಿ ಉದ್ದಿಮೆದಾರರೊಂದಿಗೆ ಮಾತನಾಡಿದ ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ್

ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ: ಪ್ರಧಾನಿ ಮೋದಿ ಆಶಯದಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. 'ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ' ಎಂಬ ಪ್ರಧಾನಿ ಅವರ ಮಂತ್ರವನ್ನು ಪಾಲಿಸುತ್ತಿದ್ದೇವೆ. ಈ ಮೂಲಕ ಕೃಷಿ, ಕೈಗಾರಿಕೆ ಹಾಗೂ ಸೇವಾ ಕ್ಷೇತ್ರಗಳನ್ನು ಮುನ್ನಡೆಸುವುದು ನಮ್ಮ ಧ್ಯೇಯ. ಹೀಗಾಗಿ ಮೂರೂ ಕ್ಷೇತ್ರಗಳಿಗೂ ನಾವು ಹೂಡಿಕೆಗೆ ಮುಕ್ತ ಅವಕಾಶ ನೀಡಿದ್ದೇವೆ. ಅಲ್ಲದೆ ಕೈಗಾರಿಕೆಗಳ ಸ್ಥಾಪನೆ, ಹೊಸ ವ್ಯವಹಾರ ಆರಂಭಕ್ಕಿರುವ ಅಡೆತಡೆಗಳನ್ನು ನಿವಾರಿಸುತ್ತಿದ್ದೇವೆ. ಎಲ್ಲಾ ಅನುಮತಿಗಳನ್ನು ಕ್ಷಿಪ್ರಗತಿಯಲ್ಲಿ ನೀಡುತ್ತಿದ್ದೇವೆ ಎಂದರು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ: ಕೈಗಾರಿಕೆಗಳಿಗೆ ಹೆಚ್ಚು ಒತ್ತಾಸೆ ನೀಡಬೇಕು ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶಯ ಕೂಡ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಯಿತು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಯಿತಲ್ಲದೆ, ಕೃಷಿ ಮಾರುಕಟ್ಟೆ ವ್ಯವಸ್ಥೆಯಲ್ಲಿದ್ದ ಕೆಲ ಪಟ್ಟಭದ್ರರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕೊನೆಗಾಣಿಸಲಾಯಿತು ಎಂದರು.

ರೈತರು ತಾವು ಬೆಳೆದ ಬೆಳೆಯನ್ನು ಯಾರಿಗೆ ಬೇಕಾದರೂ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಉತ್ತಮ ಬೆಲೆ ಪಡೆಯಬಹುದು. ಇದು ನಮ್ಮ ಸರ್ಕಾರ ಇಟ್ಟ ಪ್ರಮುಖ ಹೆಜ್ಜೆಯಾಗಿದೆ. ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸರ್ಕಾರ ಜನರಿಗೆ ತಿಳುವಳಿಕೆ ಮೂಡಿಸುತ್ತಿದೆ. ಮುಖ್ಯವಾಗಿ ರೈತರಿಗೆ ಭೂಮಿ, ನೀರು, ಗೊಬ್ಬರ ಇತ್ಯಾದಿಗಳನ್ನು ಸದ್ಬಳಕೆ ಮಾಡಿಕೊಳ್ಳುವುದಕ್ಕೆ ಬೇಕಾದ ಸಮಗ್ರ ಮಾಹಿತಿಯನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

ಗಾರ್ಮೆಂಟ್ಸ್​​​​​ಗೆ ಉತ್ತೇಜನ: ಹೆಚ್ಚು ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಗಾರ್ಮೆಂಟ್ಸ್​​​ ಉದ್ಯಮಕ್ಕೆ ಸರ್ಕಾರ ಹೆಚ್ಚು ಆದ್ಯತೆ ನೀಡುವುದರ ಜತೆಗೆ ಉತ್ತಮ ರಿಯಾಯಿತಿಗಳನ್ನು ನೀಡುತ್ತಿದೆ. ಬೆಂಗಳೂರು ಮಾತ್ರವಲ್ಲದೆ ಅತ್ಯುತ್ತಮ ಮಾನವ ಸಂಪನ್ಮೂಲ ಇರುವ ಗ್ರಾಮೀಣ, ಹಿಂದುಳಿದ ಪ್ರದೇಶಗಳಲ್ಲಿ ಸ್ಥಾಪಿಸಿದರೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.