ETV Bharat / city

ಕೇಂದ್ರ ಬಜೆಟ್​​ನತ್ತ ರಾಜ್ಯದ ಚಿತ್ತ... ಕೇಂದ್ರ ಸರ್ಕಾರದ ಮುಂದೆ ರಾಜ್ಯ ಸರ್ಕಾರ ಇಟ್ಟಿರುವ ಬೇಡಿಕೆಗಳೇನು ಗೊತ್ತಾ?

author img

By

Published : Jan 30, 2021, 9:38 PM IST

ಕೇಂದ್ರ ಬಜೆಟ್​ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಲಾಕ್‌ಡೌನ್ ಬಳಿಕ ಕೇಂದ್ರ ಸರ್ಕಾರ ಬಜೆಟ್ ಮಂಡಿಸುತ್ತಿದೆ. ಆರ್ಥಿಕ ಸಂಕಷ್ಟದ ಮಧ್ಯೆ ಬಜೆಟ್ ಮಂಡನೆಯಾಗುತ್ತಿದೆ. ಇತ್ತ ಕೇಂದ್ರ ಬಜೆಟ್ ಮೇಲೆ ರಾಜ್ಯ ಕೆಲ ನಿರೀಕ್ಷೆಗಳನ್ನು ಇಟ್ಟಿದೆ. ಆರ್ಥಿಕ ಸಂಕಷ್ಟದಿಂದ ಸೊರಗಿರುವ ರಾಜ್ಯ ಸರ್ಕಾರ, ಕೇಂದ್ರ ಬಜೆಟ್​​ನಿಂದ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಿದೆ.

state-government-expectation-on-union-budget
ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರ ಬಜೆಟ್ ಸೋಮವಾರ ಮಂಡನೆಯಾಗಲಿದೆ. ಕೋವಿಡ್-19 ಮಹಾಮಾರಿ ಸೃಷ್ಟಿಸಿದ ಆರ್ಥಿಕ ಬಿಕ್ಕಟ್ಟು ಮಧ್ಯೆ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಬಜೆಟ್ ಮಂಡನೆ ಮಾಡುತ್ತಿದೆ. ಕೇಂದ್ರ ಬಜೆಟ್​ನತ್ತ ರಾಜ್ಯವೂ ಹಲವು ನಿರೀಕ್ಷೆಗಳನ್ನು ಇಟ್ಟಿದೆ.

ಕೇಂದ್ರ ಬಜೆಟ್​ಗೆ ಕ್ಷಣಗಣನೆ ಪ್ರಾರಂಭವಾಗಿದೆ. ಲಾಕ್‌ಡೌನ್ ಬಳಿಕ ಕೇಂದ್ರ ಸರ್ಕಾರ ಬಜೆಟ್ ಮಂಡಿಸುತ್ತಿದೆ. ಆರ್ಥಿಕ ಸಂಕಷ್ಟದ ಮಧ್ಯೆ ಬಜೆಟ್ ಮಂಡನೆಯಾಗುತ್ತಿದೆ. ಇತ್ತ ಕೇಂದ್ರ ಬಜೆಟ್ ಮೇಲೆ ರಾಜ್ಯ ಕೆಲ ನಿರೀಕ್ಷೆಗಳನ್ನು ಇಟ್ಟಿದೆ. ಆರ್ಥಿಕ ಸಂಕಷ್ಟದಿಂದ ಸೊರಗಿರುವ ರಾಜ್ಯ ಸರ್ಕಾರ, ಕೇಂದ್ರ ಬಜೆಟ್​​ನಿಂದ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಿದೆ.

ಈಗಾಗಲೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಬಸವರಾಜ್ ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದು, ರಾಜ್ಯದ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅದರಂತೆ ರಾಜ್ಯ ಸರ್ಕಾರ ಈ ಬಾರಿಯ ಕೇಂದ್ರ ಬಜೆಟ್​​ನಲ್ಲಿ ಕರ್ನಾಟಕಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದೆ.

15ನೇ ಹಣಕಾಸು ಆಯೋಗ ತನ್ನ 2020-21 ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಹಣಕಾಸು ನೆರವು ನೀಡಲು ಶಿಫಾರಸು ಮಾಡಿದೆ. ಈ ಶಿಫಾರಸನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಕೇಂದ್ರ ಸರ್ಕಾರ ತನ್ನ ಅಂದಾಜು ಪರಿಷ್ಕರಿಸುವ ವೇಳೆ ರಾಜ್ಯದ ಹಿತವನ್ನು ಗಮನದಲ್ಲಿಡುವಂತೆ ಕೇಂದ್ರ ಹಣಕಾಸು ಸಚಿವೆಗೆ ಮನವಿ ಮಾಡಲಾಗಿದೆ. ಇದರಿಂದ ರಾಜ್ಯದ ವೆಚ್ಚ ಬಾಧ್ಯತೆ ಮೇಲೆ ಬೀಳುವ ಪ್ರತಿಕೂಲ ಪರಿಣಾಮ ತಪ್ಪಲಿದೆ. ಈ ಸಂಕಷ್ಟದ ಕಾಲದಲ್ಲಿ ರಾಜ್ಯದ ಅನುದಾನ ಹಂಚಿಕೆಯನ್ನು ಪರಿಷ್ಕರಿಸದಂತೆ ಮನವಿ ಮಾಡಿದೆ.

ಕೇಂದ್ರದ ನೆರೆ ಪರಿಹಾರ ಹಣದತ್ತ ನಿರೀಕ್ಷೆ

ಆಗಸ್ಟ್ ಮತ್ತು ಸೆಪ್ಟೆಂಬರ್​ನಲ್ಲಿ ಸುರಿದ ಭಾರೀ ಮಳೆಗೆ ರಾಜ್ಯದಲ್ಲಿ ಭೀಕರ ಅತಿವೃಷ್ಟಿ ಉಂಟಾಗಿತ್ತು‌. ಈ ಹಿನ್ನೆಲೆ ನೆರೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮನವಿ‌ ಮಾಡಿದೆ. ನೆರೆ ಪರಿಹಾರವಾಗಿ ಎನ್​ಡಿಆರ್​ಎಫ್/ಎಸ್​​ಡಿಆರ್‌ಎಫ್​​ನಡಿ ರಾಜ್ಯ ಕೋರಿದ್ದ 2261 ಕೋಟಿ ರೂ. ಪೈಕಿ ಕೇಂದ್ರ 1369 ಕೋಟಿ ರೂ. ಬಿಡುಗಡೆ ಮಾಡಿದೆ. ಉಳಿಕೆ ಮೊತ್ತವನ್ನು ಬಜೆಟ್ ಮೂಲಕ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.

ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲು ಮನವಿ

ಕೃಷ್ಣಾ ಮೇಲ್ದಂಡೆ ಯೋಜನೆ 3 ಮತ್ತು ಎತ್ತಿನಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ 3ಕ್ಕೆ 51,148 ಕೋಟಿ ರೂ. ವೆಚ್ಚವಾಗಲಿದ್ದು, ಉ. ಕರ್ನಾಟಕದ ಏಳು ಜಿಲ್ಲೆಗಳ 5.94 ಲಕ್ಷ ಹೆಕ್ಟೇರ್ ನೀರಾವರಿಯೇತರ ಭೂಮಿಗೆ ನೀರಾವರಿ ಒದಗಿಸಲಿದೆ. ಈ ಯೋಜನೆಯಿಂದ ಸುಮಾರು 1,21,90,982 ಜನರಿಗೆ ಅನುಕೂಲವಾಗಲಿದೆ.

ಇನ್ನು ಅದೇ ರೀತಿ ಎತ್ತಿನಹೊಳೆ ಯೋಜನೆಗೆ 12,912 ಕೋಟಿ ರೂ. ವೆಚ್ಚವಾಗಲಿದ್ದು, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಿದೆ. ಈ ಎರಡೂ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳಾಗಿ ಘೋಷಿಸಬೇಕು. ಜೊತೆಗೆ ಯೋಜನೆಯ 99% ವೆಚ್ಚವನ್ನು ಭರಿಸುವಂತೆ ಮನವಿ ಮಾಡಲಾಗಿದೆ.

ಕೇಂದ್ರ ಪ್ರಾಯೋಜಿತ ಯೋಜನೆಗೆ ಹಣ ಬಿಡುಗಡೆಗೆ ಮನವಿ

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಬಜೆಟ್​​ನಲ್ಲಿ ಮೀಸಲಿರಿಸಿದ ಅನುದಾನವನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅಂದಾಜು ಅನುದಾನಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಹೊರೆ ಬೀಳಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ವಸತಿ, ನೀರು ಸರಬರಾಜು, ಶಿಕ್ಷಣ ಮತ್ತು ಆರೋಗ್ಯ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಎಂಎಸ್ ಪಿಯಡಿ ಕೇಂದ್ರದಿಂದ 885 ಕೋಟಿ ರೂ. ಬಾಕಿ ಉಳಿದಿಕೊಂಡಿದೆ. ಹೀಗಾಗಿ ಈ ಮೊತ್ತವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಬಜೆಟ್​​​ನಲ್ಲಿ ಅನುದಾನ ಮೀಸಲಿರಿಸುವಂತೆ ಕೋರಲಾಗಿದೆ.

ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡಿ

ದೇಶದ ಆರ್ಥಿಕತೆಗೆ ಬೆಂಗಳೂರು ಬಹು ದೊಡ್ಡ ಕೊಡುಗೆ ನೀಡುತ್ತಿದೆ. ಹೀಗಾಗಿ ಬೆಂಗಳೂರು ಮೂಲ ಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೋರಲಾಗಿದೆ.

ಮೆಟ್ರೋ ರೈಲು ಯೋಜನೆ, ಸಬ್ ಅರ್ಬನ್ ರೈಲು ಯೋಜನೆ, ನಗರ ರಸ್ತೆ ಸಾರಿಗೆ ನಿಗಮಗಳಿಗೆ ಹೆಚ್ಚಿನ ಅನುದಾನದ ಅಗತ್ಯ ಇದೆ. ಪ್ರಸಕ್ತ ನೀಡುವ ಅನುದಾನ ಕಡಿಮೆಯಾಗಿದ್ದು, ಈ ಬಾರಿಯ ಬಜೆಟ್​​ನಲ್ಲಿ ಈ ಸಂಬಂಧ ಹೆಚ್ಚಿಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಾದೇಶಿಕ ಅಸಮತೋಲನ ನಿರ್ಮೂಲನೆ ಮಾಡಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಲ್ಲಿ ಕೋರಲಾಗಿದೆ.

ರೈಲ್ವೆ ಯೋಜನೆಗಳಿಗೆ ಹೆಚ್ಚುವರಿ ಅನುದಾನ

ರೈಲ್ವೆ ಯೋಜನೆಗಳಿಗೆ ಅಗತ್ಯ ಅನುದಾನ ಸಿಗುತ್ತಿಲ್ಲ. ಹೀಗಾಗಿ ಚಾಲ್ತಿಯಲ್ಲಿರುವ ರೈಲ್ವೆ ಯೋಜನೆಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿದೆ. ಅದೇ ರೀತಿ ಕರ್ನಾಟಕ ಉದ್ದನೆಯ ಕರಾವಳಿ ತೀರ ಹೊಂದಿದ್ದು, ಬೃಹತ್ ಮತ್ತು ಸಣ್ಣ ಬಂದರು ಅಭಿವೃದ್ಧಿ‌ಪಡಿಸಲು ಹೆಚ್ಚಿನ ಅವಕಾಶ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ನೆರವು ಅತ್ಯಗತ್ಯವಾಗಿದೆ. ಹೀಗಾಗಿ ಹೊಸ ನೀತಿ ರೂಪಿಸಿ ರಾಜ್ಯದಲ್ಲಿ ಬಂದರು ಅಭಿವೃದ್ಧಿಗಾಗಿ ಖಾಸಗಿ ಹೂಡಿಕೆಗೆ ಅವಕಾಶ ನೀಡಲು ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.