ETV Bharat / city

ನಕಲಿ ಮಾಸ್ಕ್ ಮಾರಾಟ ಮಾಡುತ್ತಿದ್ದವರಿಗೆ  13.37 ಲಕ್ಷ ರೂ. ದಂಡ:  ಹೈಕೋರ್ಟ್​ಗೆ ರಾಜ್ಯ ಸರ್ಕಾರದ ವರದಿ - Bangalore News

ಲಾಕ್​ಡೌನ್ ಜಾರಿಯಾದ ಮಾರ್ಚ್ 24ರಿಂದ ಈವರೆಗೆ ನಕಲಿ ಮಾಸ್ಕ್ ಮಾರಾಟ ಮಾಡುತ್ತಿದ್ದವರು ಹಾಗೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದವರ ಕುರಿತ ವರದಿಯನ್ನ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದೆ.

State Government gave to Fake Mask Sales report to highcourt
ನಕಲಿ ಮಾಸ್ಕ್ ಮಾರಾಟ ಕುರಿತು ಹೈಕೋರ್ಟ್​ಗೆ ವರದಿ ಸಲ್ಲಿಸಿದ ರಾಜ್ಯಸರ್ಕಾರ
author img

By

Published : Jul 2, 2020, 11:06 PM IST

ಬೆಂಗಳೂರು: ಕೊರೊನಾ ಭೀತಿಯಿಂದ ಜನರು ಮಾಸ್ಕ್​ಗಳನ್ನ ಮುಗಿಬಿದ್ದು ಖರೀದಿಸಲು ಆರಂಭಿಸಿದಂತೆ, ನಕಲಿ ಮಾಸ್ಕ್​ಗಳ ಮಾರಾಟ ಹಾವಳಿಯೂ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ನಕಲಿ ಮಾಸ್ಕ್ ಮಾರಾಟ ಮಾಡುತ್ತಿದ್ದವರು ಹಾಗೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ನಿರಂತರ ದಾಳಿ ನಡೆಸಿದ್ದರು. ಈ ಕುರಿತ ವರದಿಯನ್ನು ಸರ್ಕಾರ ಇದೀಗ ಹೈಕೋರ್ಟ್​ಗೆ ಸಲ್ಲಿಸಿದೆ.

ರಾಜ್ಯ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿರುವ ಮಾಹಿತಿಯಂತೆ, ರಾಜ್ಯದಲ್ಲಿ ಅಕ್ರಮವಾಗಿ ಹಾಗೂ ಅಧಿಕ ದರಕ್ಕೆ ಮಾಸ್ಕ್ ಮಾರಾಟ ಮಾಡುತ್ತಿದ್ದ 6,958 ಮೆಡಿಕಲ್ ಶಾಪ್​ಗಳ ಮೇಲೆ ದಾಳಿ ನಡೆಸಿದ್ದಾರೆ. ಹೆಚ್ಚು ಬೆಲೆಗೆ ಮಾರಾಟ ಮಾಡಿದ ಆರೋಪದಡಿ ಮೆಡಿಕಲ್ ಶಾಪ್ ಮಾಲೀಕರಿಂದ‌ ಒಟ್ಟು 13.37 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಕೊರೊನಾ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಲು ಕೋರಿದ್ದ ಪಿಐಎಲ್ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಈ ಮಾಹಿತಿ ನೀಡಿದೆ.

ಲಾಕ್​ಡೌನ್ ಜಾರಿಯಾದ ಮಾರ್ಚ್ 24ರಿಂದ ಮೇ ತಿಂಗಳ ಅಂತ್ಯದವರೆಗೆ ರಾಜ್ಯದ ಹತ್ತು ವಲಯಗಳಲ್ಲಿ ಅಕ್ರಮವಾಗಿ ಮಾಸ್ಕ್​ಗಳನ್ನು ದಾಸ್ತಾನು ಮಾಡಲಾಗಿತ್ತು. ಹೀಗೆ ಮಾಸ್ಕ್ ಗಳನ್ನು ಅಕ್ರಮ ದಾಸ್ತಾನು ಮಾಡಿದ್ದವರು ಮತ್ತು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ ಮೆಡಿಕಲ್ ಶಾಪ್​ಗಳ ಮೇಲೆ ದಾಳಿ ಮಾಡಲಾಗಿದೆ. ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು 6,958 ಕಡೆ ದಾಳಿ ನಡೆಸಿ, 335 ಪ್ರಕರಣಗಳನ್ನು ದಾಖಲಿಸಿದ್ದಾರೆ. ಜೊತೆಗೆ 13.37 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ ಎಂದು ಹೈಕೋರ್ಟ್​ಗೆ ಮಾಹಿತಿ ನೀಡಲಾಗಿದೆ.
2020ರ ಮಾರ್ಚ್ 21ರಂದು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವಾಲಯ ಮಾಸ್ಕ್​​ಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದ ಮಾರಾಟಗಾರರು ಮಾಸ್ಕ್, ಸ್ಯಾನಿಟೈಸರ್​ಗಳಿಗೆ ಅಧಿಕ ದರ ವಿಧಿಸುತ್ತಿದ್ದರು. ಗ್ರಾಹಕರನ್ನ ವಂಚಿಸುತ್ತಿರುವ ಕುರಿತು ದೂರುಗಳು ಬಂದ ಬಳಿಕ ಕಾನೂನುಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು, ಅಕ್ರಮ ಮಾರಾಟದ ವಿರುದ್ಧ ರಾಜ್ಯದೆಲ್ಲೆಡೆ ನಿರಂತರ ದಾಳಿ ನಡೆಸಿ ದಂಡ ವಿಧಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.