ETV Bharat / city

ಗುಳೇದಗುಡ್ಡಕ್ಕೆ ಜವಳಿ ಪಾರ್ಕ್: ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಹರ್ಷ

ಸ್ಥಳೀಯ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ನೀಡುವಂತೆ ಕೋರಿದ್ದೆ. ಕೊನೆಗೂ ಸರ್ಕಾರ ಜವಳಿ ಪಾರ್ಕ್ ಸ್ಥಾಪನೆಗೆ ಮುಂದಾಗಿರುವುದು ಸಮಾಧಾನ ತಂದಿದೆ- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ.

author img

By

Published : Sep 29, 2021, 10:26 PM IST

ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಬಾದಾಮಿ ವಿಧಾನಸಭಾ ಕ್ಷೇತ್ರದ ಗುಳೇದಗುಡ್ಡಕ್ಕೆ ಸರ್ಕಾರ 'ಜವಳಿ ಪಾರ್ಕ್' ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದು ನನ್ನ ಬಹುದಿನದ ಬೇಡಿಕೆಯಾಗಿತ್ತು. ಸ್ಥಳೀಯ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ನೀಡುವಂತೆ ಕೋರಿದ್ದೆ. ಕೊನೆಗೂ ಸರ್ಕಾರ ಜವಳಿ ಪಾರ್ಕ್ ಸ್ಥಾಪನೆಗೆ ಮುಂದಾಗಿರುವುದು ಸಮಾಧಾನ ತಂದಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಕೋರಿಕೆ ಮೇರೆಗೆ ಸರ್ಕಾರ ಜವಳಿ ಪಾರ್ಕ್ ಯೋಜನೆಯನ್ನು ಬಜೆಟ್​​ನಲ್ಲಿ ಸರ್ಕಾರ ಘೋಷಿಸಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ದೊರೆತಿರುವುದರಿಂದ ಮಹತ್ವದ ಯೋಜನೆಯ ಕಾರ್ಯಾರಂಭಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ. ಗುಳೇದಗುಡ್ಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ನೇಕಾರರ ಅನುಕೂಲಕ್ಕಾಗಿ ಹಾಗೂ ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಒದಗಿಸಲು 'ಜವಳಿ ಪಾರ್ಕ್' ಸ್ಥಾಪಿಸುವಂತೆ ಅವರು ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿ ಘೋಷಣೆ ಹೊರಡಿಸಿದೆ.‌ ಸರ್ಕಾರದ ಈ ನಿರ್ಧಾರಕ್ಕೆ ಗುಳೇದಗುಡ್ಡದ ಜನತೆ ಹರ್ಷ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರಿಗೆ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ಜವಳಿ & ಐಟಿ ಪಾರ್ಕ್ ಮರು ಆರಂಭ: ಸಿಎಂ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.