ETV Bharat / city

ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರೀ ಅಕ್ರಮ: ಅಭ್ಯರ್ಥಿ ಚನ್ನಪ್ಪ ಗೌಡ ನೆಲ್ಲೂರು ಆರೋಪ - ಆಮ್‌ ಆದ್ಮಿ ಪಕ್ಷದ ಮುಖಂಡರಾದ ಚನ್ನಪ್ಪ ಗೌಡ ನೆಲ್ಲೂರು

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರಾದ ಚನ್ನಪ್ಪ ಗೌಡ ನೆಲ್ಲೂರು ಆರೋಪಿಸಿದರು.

illicit-in-state-vokkaligara-sangha-polls
ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರೀ ಅಕ್ರಮ ಆರೋಪ
author img

By

Published : Nov 8, 2021, 10:03 PM IST

ಬೆಂಗಳೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಇದನ್ನು ತಡೆಯಲು ಚುನಾವಣಾ ಅಧಿಕಾರಿಗಳು ಮುಂದಾಗದಿದ್ದರೆ ಭ್ರಷ್ಟಾಚಾರಿಗಳು ಜಯಗಳಿಸಿ ಸಂಘವನ್ನು ಹಾಳು ಮಾಡಲಿದ್ದಾರೆ ಎಂದು ಚುನಾವಣೆಗೆ ಸ್ಪರ್ಧಿಸಿರುವ ಆಮ್‌ ಆದ್ಮಿ ಪಕ್ಷದ ಮುಖಂಡರಾದ ಚನ್ನಪ್ಪ ಗೌಡ ನೆಲ್ಲೂರು ಆತಂಕ ವ್ಯಕ್ತಪಡಿಸಿದರು.

ನಗರದ ಪ್ರೆಸ್​ಕ್ಲಬ್​ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಚನ್ನಪ್ಪ ಗೌಡ ನೆಲ್ಲೂರು, ಒಕ್ಕಲಿಗರ ಸಂಘದ ಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ತಿಳಿಯುತ್ತದೆ. ಭಾರೀ ಸಂಖ್ಯೆಯಲ್ಲಿ ನಕಲಿ ಮತದಾರರ ಹೆಸರು ನೋಂದಣಿಯಾಗಿದೆ. ಮತದಾರರ ಪಟ್ಟಿಯಲ್ಲಿ ಹಲವು ಮತದಾರರಿಗೆ ಒಂದೇ ವಿಳಾಸವಿದೆ. ಇನ್ನು ಕೆಲವರಿಗೆ ವಿಳಾಸವೇ ಇಲ್ಲ. ಕೆಲವು ಮತದಾರರಿಗೆ ಮೊಬೈಲ್‌ ಸಂಖ್ಯೆಯೇ ಇಲ್ಲ. ಕೆಲವು ಮತದಾರರಿಗೆ ತಪ್ಪು ಮೊಬೈಲ್‌ ನಂಬರ್‌ ನಮೂದಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ತಾಲೂಕುಗಳ ಸಾವಿರಾರು ಮತದಾರರಿಗೆ ಒಂದೇ ಮೊಬೈಲ್‌ ನಂಬರ್‌ ನೀಡಲಾಗಿದೆ ಎಂದು ಆರೋಪ ಮಾಡಿದರು.

ಮತದಾರರ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ ಊಹಿಸಲೂ ಸಾಧ್ಯವಾಗದಷ್ಟು ಅಕ್ರಮವು ವ್ಯವಸ್ಥಿತವಾಗಿ ನಡೆದಿರುವುದು ಸ್ಪಷ್ಟವಾಗುತ್ತದೆ. ಭ್ರಷ್ಟ ಅಭ್ಯರ್ಥಿಗಳು ಗೆದ್ದರೆ ಸಂಘದ ಘನತೆಗೆ ಧಕ್ಕೆಯಾಗಲಿದೆ. ಚುನಾವಣೆಯಲ್ಲಿ ಅಕ್ರಮ ಎಸಗಿ ಗೆದ್ದು ಬರುವವರು ಒಕ್ಕಲಿಗರ ಹಿತ ಕಾಪಾಡುತ್ತಾರೆಂದು ಹೇಗೆ ತಾನೇ ನಿರೀಕ್ಷಿಸಲು ಸಾಧ್ಯ, ಚುನಾವಣಾ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಕ್ರಮವನ್ನು ಹತ್ತಿಕ್ಕಬೇಕು ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಈ ಕುರಿತು ಒಕ್ಕಲಿಗರ ಸಂಘದ ಚುನಾವಣಾ ಅಧಿಕಾರಿಗಳು, ಆಡಳಿತಾಧಿಕಾರಿಗಳು ಹಾಗೂ ಸಹಕಾರ ಇಲಾಖೆಯ ಬೆಂಗಳೂರು ಜಿಲ್ಲಾ ನೋಂದಣಾಧಿಕಾರಿಗಳಿಗೆ ಲಿಖಿತ ದೂರ ಸಲ್ಲಿಸಿದ್ದೇನೆ ಎಂದು ಚನ್ನಪ್ಪ ತಿಳಿಸಿದರು.

ದಿ. ಎಚ್‌.ಎಸ್‌.ದೊರೆಸ್ವಾಮಿಯವರ ನಿಕಟವರ್ತಿ ಹಾಗೂ ಭೂಹೋರಾಟ ಸಮಿತಿಯ ಸಕ್ರಿಯ ಸದಸ್ಯರಾದ ಬಿ.ಎಚ್. ಸುರೇಶ್‌ರವರು ಈ ಸಂದರ್ಭದಲ್ಲಿ ಮಾತನಾಡಿ ಒಕ್ಕಲಿಗರ ಸಂಘದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಹಾಗೂ ಸಮುದಾಯದ ಜನರಿಗೆ ನ್ಯಾಯ ಸಿಗಬೇಕೆಂದರೆ ಚುನಾವಣೆಯು ನ್ಯಾಯಯುತವಾಗಿ ನಡೆಯಬೇಕು. ಸಹಕಾರ ಇಲಾಖೆಯು ತಕ್ಷಣವೇ ಮಧ್ಯಪ್ರವೇಶಿಸಿ ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಮತದಾರರ ಪಟ್ಟಿಯಲ್ಲಿರುವ ನಕಲಿ ಮತದಾರರನ್ನು ತೆಗೆದು, ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.