ಬೆಂಗಳೂರು: ಮಹಾನಗರದಲ್ಲಿ ಬೀದಿ ವ್ಯಾಪಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ.
3 ತಿಂಗಳಿಂದ ಸರಿಯಾದ ವ್ಯಾಪಾರವಿಲ್ಲ, ಮನೆ ಬಾಡಿಗೆ ಕಟ್ಟಲು ಆಗ್ತಿಲ್ಲ, ಮಕ್ಕಳ ಪೋಷಣೆ ಸೇರಿ ಹತ್ತಾರು ಸಮಸ್ಯೆಗಳಿಂದ ಸಾಲ ಮಾಡುವ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ಸರ್ಕಾರ 15,000 ಪರಿಹಾರ ಧನ ನೀಡಬೇಕೆಂದು ಒತ್ತಾಯಿಸಿ ಒಂದು ದಿನದ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಯಶವಂತಪುರ ಮಾರುಕಟ್ಟೆ, ಮೂಡಲಪಾಳ್ಯ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಪ್ರತಿಭಟನೆ ಫಲಕ ಹಿಡಿದು ವ್ಯಾಪಾರ ಮಾಡುತ್ತಿರುವುದು ಕಂಡು ಬಂತು.