ಬೆಂಗಳೂರು: ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಹಾಗೂ ಹೊರ ರಾಜ್ಯ ಮತ್ತು ವಿದೇಶಗಳಿಂದ ಬಂದವರು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.
ವೈದ್ಯಕೀಯ ತಪಾಸಣೆಗೆ ಮಾಡಿಸಿಕೊಳ್ಳದೆ ನಿರ್ಲಕ್ಷಿಸಿದರೆ ತಮ್ಮ ಜೀವಕ್ಕೂ ಮತ್ತು ಸಂಬಂಧಿಕರ ಜೀವಕ್ಕೂ ತೊಂದರೆ ಹಾಗೂ ಸಮುದಾಯದ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ. ಒಂದು ವೇಳೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳದಿದ್ದರೆ ಕಠಿಣ ಶಿಕ್ಷೆ ಖಚಿತ ಎಂದು ಎಚ್ಚರಿಸಿದ್ದಾರೆ.
ಪ್ರಧಾನಿ ಮೋದಿ ಹೇಳಿದಂತೆ ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಮೊಬೈಲ್ ಟಾರ್ಚ್ ಅಥವಾ ಮೇಣದ ಬತ್ತಿ ಬೆಳಗಿಸಬೇಕು. ಈ ಮೂಲಕ ದೇಶಕ್ಕೆ ಅಂಟಿಕೊಂಡಿರುವ ಅಂಧಕಾರವನ್ನು ತೊಲಗಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.