ETV Bharat / city

ಕೊರೊನಾ ಪ್ರಕರಣ: ಸುಗ್ರೀವಾಜ್ಞೆ ಸೇರಿ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನ

ಪಾದರಾಯನಪುರ ಸೇರಿದಂತೆ ರಾಜ್ಯದ ವಿವಿಧೆಡೆ ವೈದ್ಯರು, ಆಶಾ ಕಾರ್ಯಕರ್ತರು, ಅಧಿಕಾರಿಗಳ ವಿರುದ್ಧ ಹಲ್ಲೆ ಪ್ರಕರಣ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಕೇರಳ ಮತ್ತು ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಎಪಿಡಮಿಕ್ ಕಾಯ್ದೆ ಜಾರಿಗೊಳಿಸಲು ಚರ್ಚಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ  ಸುದ್ದಿಗೋಷ್ಠಿ ನ್ಯೂಸ್​

author img

By

Published : Apr 20, 2020, 3:41 PM IST

Updated : Apr 20, 2020, 4:43 PM IST

ಬೆಂಗಳೂರು: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸುಗ್ರೀವಾಜ್ಞೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದ್ರೆ ಇದು ಜಾರಿಯಾದ ಮೇಲೆಯೇ ಮಾಹಿತಿ ನೀಡಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ನ್ಯೂಸ್​

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದರಾಯನಪುರ ಸೇರಿದಂತೆ ರಾಜ್ಯದ ವಿವಿಧೆಡೆ ವೈದ್ಯರು, ಆಶಾ ಕಾರ್ಯಕರ್ತರು, ಅಧಿಕಾರಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಇದೀಗ ಬಿಗಿ ನಿಲುವು ತರಲು ಮುಂದಾಗಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಎಪಿಡಮಿಕ್ ಕಾಯ್ದೆ ಜಾರಿಗೊಳಿಸಲು ಚರ್ಚಿಸಲಾಗಿದೆ. ಆಶಾ ಕಾರ್ಯಕರ್ತರು, ವೈದ್ಯರು, ಅಧಿಕಾರಿಗಳ ಮೇಲೆ ಹಲ್ಲೆ ಮಾಡುತ್ತಿದ್ದು, ಉದ್ದೇಶಪೂರ್ವಕವಾಗಿ ಸೋಂಕು ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.

ಇನ್ನು ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ನಿರ್ಧರಿಸಲಾಗಿದ್ದ ವಿವಿಧ 46 ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಅನುಮೋದನೆ ನೀಡಲಾಗಿದೆ‌. ಇದರ ಜೊತೆಗೆ ಟಿಪ್ಪು ಗಲಾಟೆ, ಕನ್ನಡ ಪರ ಹೋರಾಟಗಾರರು, ಕಾವೇರಿ ಗಲಾಟೆ, ರೈತರ ಗಲಾಟೆಯಲ್ಲಿ ಭಾಗಿಯಾದವರ ವಿರುದ್ಧದ 152 ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಪುಟದ ಇತರೆ ಪ್ರಮುಖ ತೀರ್ಮಾನಗಳು:

1) ಸನ್ನಡತೆ ಆಧಾರದಲ್ಲಿ ಕೈದಿಗಳ ಅವಧಿಪೂರ್ವ ಬಿಡುಗಡೆ ಸಂಬಂಧ ನಿಯಮ ತಿದ್ದುಪಡಿಗೆ ತೀರ್ಮಾನ

2) ಸಿಎಂ ಅನಿಲ ಭಾಗ್ಯ ಯೋಜನೆಯಡಿ ಮೂರು ತಿಂಗಳು ಉಚಿತ ಸಿಲಿಂಡರ್ ಸರಬರಾಜು ಮಾಡಲು ತೀರ್ಮಾನಿಸಲಾಗಿದ್ದು, ಸುಮಾರು ಒಂದು ಲಕ್ಷ ಜನರಿಗೆ ಇದರಿಂದ ಸಹಾಯವಾಗಲಿದೆ.

3) ಚಿಕ್ಕಮಗಳೂರಿಗೆ 438.75 ಕೋಟಿ ರೂ. ಹೊಸ ಮೆಡಿಕಲ್ ಕಾಲೇಜಿಗೆ ಅಸ್ತು

4) ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಿಬ್ಬಂದಿಗೆ ಏಳನೇ ವೇತನ ಆಯೋಗದಡಿ ಪರಿಷ್ಕೃತ ವೇತನ ನೀಡಲು ತೀರ್ಮಾನ. 2,800 ಸಿಬ್ಬಂದಿಗೆ ಪರಿಷ್ಕೃತ ವೇತನ ನೀಡಲು ತೀರ್ಮಾನಿಸಲಾಗಿದ್ದು, ಇದರಿಂದ 137.57 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ.

5) ಲಾಕ್‌ಡೌನ್ ಮೇ 3 ರ ವರೆಗೆ ವಿಸ್ತರಣೆ ಮಾಡಲು ತೀರ್ಮಾನ. ಕೇಂದ್ರದ ಮಾರ್ಗಸೂಚಿ ಅನ್ವಯ ಕೆಲ ಸಡಿಲಿಕೆ ಮಾಡಲು ಮೂರು ದಿನಗಳಲ್ಲಿ ಸಿಎಂ ನೇತೃತ್ವದಲ್ಲಿ ಸಭೆ. ಸದ್ಯಕ್ಕೆ ಲಾಕ್​ಡೌನ್ ಯಥಾಸ್ಥಿತಿ ಕಾಪಾಡಲು ನಿರ್ಧಾರ.

Last Updated : Apr 20, 2020, 4:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.