ETV Bharat / city

PSI ಮರು ಪರೀಕ್ಷೆಗೆ ವಿರೋಧ: ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅಭ್ಯರ್ಥಿಗಳು

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನದ ಹಿನ್ನೆಲೆ ನಿಷ್ಪಕ್ಷಪಾತ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್​​ನಿಂದ ನಿನ್ನೆ(ಶುಕ್ರವಾರ) ಪ್ರತಿಭಟನೆ ನಡೆಸಲಾಯಿತು.

Students protest against  re-exam for psi recruitment
ಪಿಎಸ್‌ಐ ಮರು ಪರೀಕ್ಷೆಗೆ ವಿರೋಧ: ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅಭ್ಯರ್ಥಿಗಳು
author img

By

Published : Apr 30, 2022, 9:00 AM IST

ಬೆಂಗಳೂರು: ಸರ್ಕಾರ ಪಿಎಸ್‌ಐ ಪರೀಕ್ಷೆಯನ್ನು ಮತ್ತೆ ಮಾಡುವುದಾಗಿ ಘೋಷಿಸಿದೆ. ಈ ಹಿನ್ನೆಲೆ ಪಿಎಸ್‌ಐ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನಗರದ ಹಲವೆಡೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ವೈಮನಸ್ಸು ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, 'ಕಾನೂನು ಪ್ರಕಾರ ನೂರು ಜನಕ್ಕೆ ಶಿಕ್ಷೆ ಆಗದಿದ್ದರೂ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾದರು' ಎನ್ನುತ್ತದೆ. ಆದರೆ, ಇಲ್ಲಿ ಬುಹುತೇಕ ನಿರಪರಾಧಿಗಳಿಗೆ ಶಿಕ್ಷೆ ಆಗುತ್ತಿದೆ. ಈ ರೀತಿಯ ಸರ್ಕಾರದ ನೀತಿ ಸರಿ ಅಲ್ಲ. ಇದರಿಂದ ಪ್ರಾಮಾಣಿಕವಾಗಿ ಬರೆದವರಿಗೂ ಅನ್ಯಾಯವಾಗುತ್ತದೆ. ಅದರೊಂದಿಗೆ ನಮ್ಮಲ್ಲಿ ಅನೇಕರು ವಯೋಮಿತಿ ಗಡಿಯಲ್ಲಿ ಇದ್ದಾರೆ. ಅವರ ಕನಸು ಮತ್ತು ಪರಿಶ್ರಮ ಎರಡೂ ವ್ಯರ್ಥವಾಗುತ್ತದೆ ಎಂದರು. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿವಿಧ ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದು, ಶನಿವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನದ ಹಿನ್ನೆಲೆ ನಿಷ್ಪಕ್ಷಪಾತ ತನಿಖೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್​​ನಿಂದ ನಿನ್ನೆ(ಶುಕ್ರವಾರ) ಪ್ರತಿಭಟನೆ ನಡೆಸಲಾಯಿತು.

ಪಿಎಸ್ಐ ನೇಮಕಾತಿ ಹಗರಣದಿಂದ ಸಾವಿರಾರು ಪ್ರಾಮಾಣಿಕ ಅಭ್ಯರ್ಥಿಗಳು ಇಂದು ತೀವ್ರ ಸಂಕಷ್ಟದಲ್ಲಿದ್ದಾರೆ. ಪ್ರಾಮಾಣಿಕರಿಗೆ ಸಹಕರಿಸುವ ಮನೋಭಾವ ಬಿಜೆಪಿ ಸರ್ಕಾರ ತೋರುತ್ತಿಲ್ಲ. ಆದ್ದರಿಂದ ಈ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಕಾರ್ಯ ಬಿಜೆಪಿ ಸರ್ಕಾರದಿಂದ ನಡೆಯುತ್ತಿದೆ. ದಿವ್ಯಾ ಹಾಗರಗಿ ಮಾಲೀಕತ್ವದ ವಿದ್ಯಾಸಂಸ್ಥೆ ಮೂಲಕ ಭ್ರಷ್ಟಾಚಾರ ನಡೆದಿರುವುದು ಬಹಿರಂಗವಾಗಿದೆ.

ಆದರೂ ಕೇವಲ ಭಾವಚಿತ್ರದ ಮೂಲಕ ಬಿಜೆಪಿ ರಾಜಕೀಯ ಲಾಭ ಪಡೆಯಲು ಹಾಗೂ ತನಿಖೆಯ ವಿಧಾನ ಬದಲಾಯಿಸಲು ಮುಂದಾಗಿದೆ. ಬಿಜೆಪಿ ಭ್ರಷ್ಟರನ್ನು ರಕ್ಷಿಸುವ ಕಾರ್ಯದಲ್ಲಿ ಮುಳುಗಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆರೋಪಿಸಿದರು.

Students protest against  re-exam for psi recruitment
ಪಿಎಸ್‌ಐ ಮರು ಪರೀಕ್ಷೆಗೆ ವಿರೋಧ: ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅಭ್ಯರ್ಥಿಗಳು

ನಿತ್ಯ ಒಂದಲ್ಲ ಒಂದು ಹಗರಣ, ಭ್ರಷ್ಟಾಚಾರ ಬಹಿರಂಗವಾಗುತ್ತಿದೆ. ಎಲ್ಲ ಇಲಾಖೆಯಲ್ಲೂ ನೇಮಕಾತಿ ಭ್ರಷ್ಟಾಚಾರವಾಗಿದೆ. ಆದ್ದರಿಂದ ಈ ಹಗರಣದ ನ್ಯಾಯಯುತ ತನಿಖೆಗೆ ನ್ಯಾಯಮೂರ್ತಿಗಳಿಂದ ತನಿಖಾ ತಂಡ ರಚಿಸಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಬೇಕು.

ಹಾಗೂ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಸರ್ಕಾರ ಕೂಡಲೇ ಅವರ ರಕ್ಷಣೆಗೆ ಧಾವಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳಾದ ಎಸ್.ಮನೋಹರ್ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಅಕ್ರಮ ಹಿನ್ನೆಲೆ, ಅಭ್ಯರ್ಥಿಗಳಿಗೆ ಮರುಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.