ಬೆಂಗಳೂರು: ದಿವಂಗತ ದಲಿತ ಸಾಹಿತಿ ಸಿದ್ದಲಿಂಗಯ್ಯ ಸೇರಿದಂತೆ ಐವರು ಕನ್ನಡಿಗರಿಗೆ ಕೆಂದ್ರ ಸರ್ಕಾರದಿಂದ ಕೊಡಮಾಡುವ ಪದ್ಮ ಪುರಸ್ಕಾರ ಪ್ರಶಸ್ತಿ ಪ್ರಕಟಿಸಲಾಗಿದೆ. ವಿಜ್ಞಾನ ಹಾಗೂ ಇಂಜಿನಿಯರಿಂಗ್ ರಂಗಕ್ಕೆ ನೀಡಿದ ಅಮೋಘ ಕೊಡುಗೆ ಸ್ಮರಿಸಿ ಸುಬ್ಬಣ್ಣ ಅಯ್ಯಪ್ಪನ್ ಅವರನ್ನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಪದ್ಮಶ್ರೀ ಸುಬ್ಬಣ್ಣ ಅಯ್ಯಪ್ಪನ್ ಪರಿಚಯ: ಸುಬ್ಬಣ್ಣ ಅಯ್ಯಪ್ಪನ್ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐ.ಸಿ.ಎ.ಆರ್) ಮಾಜಿ ಮಹಾನಿರ್ದೇಶಕರು ಮತ್ತು ಕೇಂದ್ರ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಮಣಿಪುರ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಬೆಂಗಳೂರಿನವರಾದ ಅಯ್ಯಪ್ಪನ್ ಸೇವೆ ಸಲ್ಲಿಸಿದ್ದಾರೆ. ಹೆಸರಾಂತ ಜಲಚರ ವಿಜ್ಞಾನಿಯಾಗಿ ಮತ್ತು ಭಾರತದ ನೀಲಿ ಕ್ರಾಂತಿಗೆ ಶಕ್ತಿ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಓದಿ: Republic Day: ಲಡಾಖ್ನಲ್ಲಿ ಕೊರೆಯುವ ಚಳಿಯಲ್ಲಿ ಐಟಿಬಿಪಿಯಿಂದ ಗಣರಾಜ್ಯೋತ್ಸವ ಆಚರಣೆ
ಡಾ. ಅಯ್ಯಪ್ಪನ್ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪಿಹೆಚ್‌ಡಿ ಮತ್ತು ಮಂಗಳೂರಿನ ಫಿಶರೀಸ್ ಕಾಲೇಜಿನಲ್ಲಿ ಮೀನು ಉತ್ಪಾದನೆ ಮತ್ತು ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮೀನುಗಾರಿಕೆ, ಲಿಮ್ನಾಲಜಿ ಮತ್ತು ಜಲಜೀವಿಗಳ ಸೂಕ್ಷ್ಮ ಜೀವವಿಜ್ಞಾನದ ಕ್ಷೇತ್ರಗಳಲ್ಲಿ ಸಾಕಷ್ಟು ಸಂಶೋಧನೆಯನ್ನು ಕೈಗೊಂಡಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ಮತ್ತು ಪ್ಲಾನಿಂಗ್ ಕಮಿಷನ್ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಕೂಡ ಇವರು ಸೇವೆ ಸಲ್ಲಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ