ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅನಿಲ ದರ ಸತತವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಎಸ್‌ಯುಸಿಐಸಿ ರಾಮಮೂರ್ತಿ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಡೀಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ದರವನ್ನು ಸತತವಾಗಿ ಏರಿಸುತ್ತಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಎರಡು ವರ್ಷದ ಅಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ಮುಟ್ಟಿದೆ. ಕಳೆದ 15 ದಿನಗಳಲ್ಲಿ ಅಡುಗೆ ಅನಿಲ ದರ 100 ರೂಪಾಯಿ ಹೆಚ್ಚಳವಾಗಿದೆ.
ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು : ಸ್ಥಳದಲ್ಲೇ ಇಬ್ಬರು ಸಾವು
ನವೆಂಬರ್ ತಿಂಗಳಲ್ಲೇ 30 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಏಪ್ರಿಲ್ ಮತ್ತು ಜುಲೈ ನಡುವೆ 18 ದಶ ಲಕ್ಷಕ್ಕೂ ಹೆಚ್ವಿನ ಉದ್ಯೋಗಗಳು ನೆಲಕಚ್ಚಿವೆ. ಇದರಿಂದಾಗಿ ಕೂಲಿ ಕಾರ್ಮಿಕರು, ಮಧ್ಯಮ ವರ್ಗವರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಕೊರೊನಾ ಕಾರಣದಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಜನತೆಗೆ, ಸತತ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.