ETV Bharat / city

ಕೊರೊನಾ ಹೆಚ್ಚಳಕ್ಕೆ ಕಾಂಗ್ರೆಸ್ ಹೊಣೆ, ನಿಯಮ ಉಲ್ಲಂಘನೆಯಡಿ ಕೇಸ್ ದಾಖಲಿಸುವ ಕುರಿತು ಸಿಎಂ ಜೊತೆ ಚರ್ಚೆ: ಸುಧಾಕರ್ - Karnataka Covid cases

ಕಾಂಗ್ರೆಸ್​ನವರು ಪ್ರತಿಭಟನೆ ಮಾಡಿದ್ರೆ ಫ್ರೀಡಂ ಪಾರ್ಕ್​ನಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಅವರು ಇವತ್ತು ರಾಜಭವನ ಚಲೋ ಮಾಡುತ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೋವಿಡ್​ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವ ಡಾ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಸುಧಾಕರ್
ಸುಧಾಕರ್
author img

By

Published : Jun 16, 2022, 11:19 AM IST

ಬೆಂಗಳೂರು: ಕಾಂಗ್ರೆಸ್ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ. ಕಾಂಗ್ರೆಸ್​ನವರೇ ನೈತಿಕ ಹೊಣೆ ಹೊರಬೇಕು, ಪ್ರತಿಭಟನೆ ಮಾಡುವವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಆರ್.ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ಮಾಡಿದರೆ ಫ್ರೀಡಂ ಪಾರ್ಕ್​ನಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಅವರು ಇವತ್ತು ರಾಜಭವನ ಚಲೋ ಮಾಡುತ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೋವಿಡ್​ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು, ಒಂದು ಕಡೆ ಸಂವಿಧಾನದ ಬಗ್ಗೆ ಸಾಕಷ್ಟು ಭಾಷಣ ಮಾಡ್ತಾರೆ, ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುವ ಕೆಲಸ ಮಾಡ್ತಾರೆ ಎಂದು ಕಾಂಗ್ರೆಸ್ ರಾಜಭವನ ಮುತ್ತಿಗೆಯನ್ನು ಸಚಿವ ಸುಧಾಕರ್ ಟೀಕಿಸಿದರು.

ಈ ಹಿಂದೆ ಮಾಜಿ ಪ್ರಧಾನಿ ಪಿವಿ ನರಂಸಿಹರಾವ್, ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿ ಅವರು ವಿರುದ್ಧವೂ ವಿಚಾರಣೆ ನಡೆದಿತ್ತು. ನಮ್ಮ ಖರ್ಗೆಯವರ ವಿಚಾರಣೆ ಕೂಡ ನದೀತು. ಆಗ ಯಾರೂ ಚಕಾರ ಎತ್ತಲಿಲ್ಲ. ಆಗ ಯಾರು ಪ್ರತಿಭಟನೆಗೆ ಮುಂದಾಗಲಿಲ್ಲ, ಕಾಂಗ್ರೆಸ್ ನಾಯಕರು ಮಾಡುತ್ತಿರುವುದು ಸರಿಯಲ್ಲ. ಈ ರೀತಿ ಮಾಡುವುದರಿಂದ ತಪ್ಪು ಸಂದೇಶ ಹೋಗುತ್ತಿದೆ. ಏನೇ ಇದ್ದರೂ ವಿಚಾರಣೆ ಆಗಲಿ, ಸತ್ಯ ಹೊರಗಡೆ ಬರಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ಟಾಂಗ್ ನೀಡಿದರು.

ಕೋವಿಡ್ ಹೆಚ್ಚಳವಾದ್ರೂ ಆತಂಕ ಬೇಡ: ಕಾನ್ಪುರ ಐಐಟಿ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಜೂನ್ ಮೂರನೇ ವಾರದಿಂದ ಅಕ್ಟೋಬರ್‌ವರೆಗೂ ಕೊರೊನಾ ಅಲೆ ಹೆಚ್ಚು ಬರಬಹುದು ಎಂದು ವರದಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಇವರೇ ಪ್ರಿಡಿಕ್ಟ್ ಮಾಡಿ ವರದಿ ನೀಡಿದ್ದರು.

ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರೋದ್ರಿಂದ ಜನಸಾಮಾನ್ಯರು ಯಾವುದೇ ಆತಂಕ, ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಶಾಲೆಗಳಲ್ಲಿ ಮುನ್ನೆಚ್ಚರಿಕೆ: ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ಒಂದೆರೆಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ. ಅದು ಒಂದೋ ಎರಡೋ ಶಾಲೆ ಅಷ್ಟೇ. ಈಗಾಗಲೇ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಮಾಸ್ಕ್ ಚೆಕ್ ಮಾಡುತ್ತಿದ್ದೇವೆ. ಶಾಲೆಗಳಲ್ಲಿ ಎಲ್ಲ ನಿಯಮ ಪಾಲನೆ ಮಾಡುತ್ತಿದ್ದಾರೆ. ಹಾಗಾಗಿ, ಪೋಷಕರಲ್ಲಿ ಆತಂಕ ಬೇಡ ಎಂದರು.
ಇದನ್ನೂ ಓದಿ: ಬಸ್ ​- ಲಾರಿ ಮುಖಾಮುಖಿ ಡಿಕ್ಕಿ: 5 ಮಂದಿ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.