ETV Bharat / city

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮಠಾಧಿಪತಿಗಳಿಂದ ಒತ್ತಾಯ : ಪರಿಶೀಲಿಸುವುದಾಗಿ ಸಿಎಂ ಭರವಸೆ - ಮತಾಂತರ ನಿಷೇಧ ಕಾಯ್ದೆ ಜಾರಿ

ಮಠಾಧಿಪತಿಗಳು ಮತಾಂತರ ನಿಷೇಧ ಕಾಯ್ದೆ (conversion prohibition act) ಜಾರಿಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪರಿಶೀಲಿಸಲಾಗುತ್ತದೆ. ಅಲ್ಲದೆ, ಅನ್ಯ ರಾಜ್ಯಗಳಲ್ಲಿ ಮತಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ಜಾರಿಗೊಳಿಸಿರುವ ಕಾಯ್ದೆಗಳ ಅಧ್ಯಯನ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು..

swamijies-requested-cm-bommai-to-implement-conversion-prohibition-act
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Nov 12, 2021, 10:54 PM IST

ಬೆಂಗಳೂರು : ರಾಜ್ಯದ ಮಠಾಧಿಪತಿಗಳು ಮತಾಂತರ ನಿಷೇಧ ಕಾಯ್ದೆ (conversion prohibition act) ಜಾರಿಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪರಿಶೀಲಿಸುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮಠಾಧಿಪತಿಗಳಿಂದ ಒತ್ತಾಯ ಬಂದಿದೆ.. ಸಿಎಂ

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಕುರಿತು ರಾಜ್ಯದ ಮಠಾಧಿಪತಿಗಳು ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪರಿಶೀಲಿಸುತ್ತೇವೆ. ಅಲ್ಲದೇ, ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ ಎಂಬುದನ್ನು ನೋಡುತ್ತಿದ್ದೇವೆ.

ಹಾಗೆಯೇ, ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಮಂತಾಂತರ ನಿಷೇಧ ಕಾಯ್ದೆಗಳ ಕುರಿತು ಅಧ್ಯಯನ ಮಾಡಲಾಗುತ್ತದೆ. ನಂತರದ ದಿನಗಳಲ್ಲಿ ಕಾಯ್ದೆ ಜಾರಿಗೆ ತರಲು ಸಾಧ್ಯವೇ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.