ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆ ಎಸ್ ಆರ್ ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಫೆ.20, 21ರಂದು ನಾನಾ ಭಾಗಗಳಿಗೆ 300ಕ್ಕೂ ಹೆಚ್ಚು ವಿಶೇಷ ಸಾರಿಗೆ ಬಸ್ಗಳನ್ನು ಬಿಡಲಾಗುತ್ತದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 23ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಇರಲಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಇರಲಿದೆ.
ಇನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಿಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ತೆರಳಲಿವೆ. ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕ್ಕಿಂಗ್‍ನ್ನು ವೆಬ್ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯಗಳಲ್ಲಿರುವ 696 ಗಣಕೀಕೃತ ಬುಕ್ಕಿಂಗ್ ಕೌಂಟರ್ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದೆಂದು ನಿಗಮ ತಿಳಿಸಿದೆ.
ಸಹಕಾರ ಸಾರಿಗೆ ಸ್ಥಗಿತ ಹಿನ್ನೆಲೆ ಕೆ ಎಸ್ ಆರ್ ಟಿಸಿಯಿಂದ ಸಾರಿಗೆ ಸೌಲಭ್ಯ ವ್ಯವಸ್ಥೆ:
ಸಹಕಾರ ಸಾರಿಗೆ ಸಂಸ್ಥೆಯ ವಾಹನಗಳನ್ನು ಫೆಬ್ರವರಿ 15ರಿಂದ ಕಾರ್ಯಾಚರಣೆ ಮಾಡದೇ ಸ್ಥಗಿತಗೊಳಿಸಿರುವ ಹಿನ್ನೆಲೆ ಕೆ ಎಸ್ ಆರ್ ಟಿಸಿ ನಿಗಮದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಮಂಗಳೂರು ವಿಭಾಗದಿಂದ ಕೊಪ್ಪದಿಂದ ಶಿವಮೊಗ್ಗ, ತೀರ್ಥಹಳ್ಳಿ, ಮೇಲ್ಪಾಲ್, ಬಾಳೇ ಹೊನ್ನೂರು, ಮೂಡಬೂರು, ಮಲ್ಲಂದೂರು, ಕಟ್ಟಿನಮನೆ, ಶೃಂಗೇರಿ-ಕೊಪ್ಪ-ಶಿವಮೊಗ್ಗ, ಉಡುಪಿ-ಶೃಂಗೇರಿ, ಬಾಳೇಹೊನ್ನೂರು,ಉಡುಪಿ-ಶೃಂಗೇರಿ-ಚಿಕ್ಕಮಗಳೂರು, ಕೊಲ್ಲೂರು- ಕುಂದಾಪುರ-ಶೃಂಗೇರಿ-ಕೊಪ್ಪ, ಉಡುಪಿ-ಕೊಪ್ಪ-ಬೀರೂರು ಮಾರ್ಗಗಳಲ್ಲಿ ಒಟ್ಟು 16 ಬಸ್‌ಗಳ 56 ಸುತ್ತುವಳಿಗಳನ್ನು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಅವಶ್ಯಕತೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಕಲ್ಪಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆ ಹೊರಡಿಸಿದೆ.