ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಡೆಸುತ್ತಿರುವ ಮನೆ-ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಹರ್ ಘರ್ ತಿರಂಗ ಅಭಿಯಾನಕ್ಕೆ ಪ್ರೋತ್ಸಾಹವಾಗಿ ರಾಜ್ಯ ಅಂಚೆ ಇಲಾಖೆ 7.50 ಲಕ್ಷ ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡುವ ಗುರಿ ಹೊಂದಿದೆ ಎಂದು ರಾಜ್ಯ ಚೀಫ್ ಪೋಸ್ಟ್ ಮಾಸ್ಟರ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ಅಂಚೆ ಕಚೇರಿಗಳಲ್ಲಿ ಹರ್ ಘರ್ ತಿರಂಗ ಅಭಿಯಾನ ನಡೆಸಲಾಗುತ್ತಿದೆ. ಕರ್ನಾಟಕ ಪೋಸ್ಟಲ್ ಸರ್ಕಲ್ ಇದುವರೆಗೆ 9500 ಕ್ಕೂ ಹೆಚ್ಚು ಅಂಚೆ ಕಛೇರಿಗಳ ಮೂಲಕ 2.5 ಲಕ್ಷಕ್ಕೂ ಹೆಚ್ಚು ಧ್ವಜಗಳನ್ನು ಮಾರಾಟ ಮಾಡಿದೆ. 97 ಅಂಚೆ ಕಚೇರಿಯಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.
ಗ್ರಾಹಕರು #Indiapost4 Tiranga & #HarGharTiranga ಹ್ಯಾಶ್‌ಟ್ಯಾಗ್‌ಗಳೊಂದಿಗೆ ಇಂಡಿಯಾ ಪೋಸ್ಟ್ ಮತ್ತು ಅಮೃತ್ ಮಹೋತ್ಸವ ಹ್ಯಾಂಡಲ್‌ಗಳನ್ನು ಟ್ಯಾಗ್ ಮಾಡುವ ಮೂಲಕ ಸೆಲ್ಫಿಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಹುದು. ಪ್ರಧಾನ ಅಂಚೆ ಕಚೇರಿಗಳು "ಹರ್ ಘರ್ ತಿರಂಗ" ಗೀತೆಯನ್ನು ಬಿಡುಗಡೆ ಮಾಡುವುದರ ಜೊತೆಗೆ ಪ್ರಚಾರದ ವೀಡಿಯೊಗಳನ್ನು ಸಹ ಪೋಸ್ಟ್ ಮಾಡುತ್ತವೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಾದ್ಯಂತ ಅಂಚೆ ವಿಭಾಗಗಳ ಮೂಲಕ 19 ಸ್ಥಳಗಳಲ್ಲಿ ಪ್ರಭಾತ್ ಫೆರಿಹಾಸ್ ಆಯೋಜಿಸಲಾಗಿದೆ. ಅಂಚೆ ಸಿಬ್ಬಂದಿ ಮತ್ತು ಸ್ಥಳೀಯ ನಾಗರಿಕರನ್ನು ಒಳಗೊಂಡು 50 ರಿಂದ 75 ಭಾಗವಹಿಸಲಿದ್ದಾರೆ. ರೋಡ್ ಶೋಗಳು, ಸಭೆಗಳು ಶಾಲಾ ಕಾರ್ಯಾಗಾರಗಳನ್ನು ಮಾಡಲಾಗುತ್ತದೆ. ಅಂಚೆ ವಿಭಾಗಗಳಿಂದ 13 ಸ್ಥಳಗಳಲ್ಲಿ ಅಭಿಯಾನದ ಬಗ್ಗೆ ಮಾಹಿತಿ ಪ್ರಸಾರದ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಪಾಲಿಸ್ಟರ್ ಬಟ್ಟೆಗಳಿಂದ ರಾಷ್ಟ್ರ ಧ್ವಜ ತಯಾರಿ: ಆತಂಕದಲ್ಲಿ ಬೆಂಗೇರಿ ಖಾದಿ ಗ್ರಾಮೋದ್ಯೋಗ ಸಂಸ್ಥೆ ಸಿಬ್ಬಂದಿ