ಬೆಂಗಳೂರು: ರಾಜಭವನದಲ್ಲಿ ಇಂದು ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರಿಗೆ ಚಹಾಕೂಟವನ್ನು ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಹಾಕೂಟದಲ್ಲಿ ಭಾಗಿಯಾಗಿದ್ದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಸೇರಿ ಇತರ ನ್ಯಾಯಮೂರ್ತಿಗಳು ಮತ್ತವರ ಕುಟುಂಬಸ್ಥರು ಭಾಗಿಯಾಗಿದ್ದು, ಎಲ್ಲರ ಜೊತೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರು ಮಾತುಕತೆ ನಡೆಸಿದರು.
ರಾಜಭವನದ ಚಹಾಕೂಟದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪತಿಗಳಿಗೆ ರಾಮಾಯಣ ದರ್ಶನಂ, ಪರ್ವ ಕಾದಂಬರಿ ಕೊಡುಗೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿದ್ದು, ಭೇಟಿ ವೇಳೆ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ಪರ್ವ ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿ ಅವರಿಗೆ ಕೊಡುಗೆಯಾಗಿ ನೀಡಿದರು.ರಾಷ್ಟ್ರಪತಿಗಳಿಗೆ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿ ನೀಡಿದ ಸಚಿವ ಸುನೀಲ್ ಕುಮಾರ್