ಬೆಂಗಳೂರು: ಡ್ರಗ್ಸ್ ದಂಧೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆರೋಪಿಯ ಪಾಸ್ಪೋರ್ಟ್, ವೀಸಾ ರದ್ದುಪಡಿಸದೇ ಸಿಸಿಬಿ ಎಡವಟ್ಟಿಗೆ ದಾರಿ ಮಾಡಿಕೊಡುತ್ತಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.
ಪಾಸ್ಪೋರ್ಟ್, ವೀಸಾ ರದ್ದು ಮಾಡಿದ್ದರೆ ಆದಿತ್ಯ ದೇಶ ಬಿಡುತ್ತಿರಲಿಲ್ಲ. ಆತನ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ 11 (ಸೆ.4ರಂದು ಪ್ರಕರಣ ದಾಖಲಾಗಿದೆ) ದಿನಗಳಾದರೂ ಇನ್ನೂ ಪತ್ತೆಯಾಗಿಲ್ಲ. ಆಳ್ವಾ ಐಷಾರಾಮಿ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಥಾಯ್ಲೆಂಡ್ನಲ್ಲೂ ಪಾರ್ಟಿ ಮಾಡುತ್ತಿದ್ದ ಎನ್ನಲಾಗಿದೆ.
ಆದಿತ್ಯ ಎಲ್ಲಿದ್ದಾರೆ ಬಗ್ಗೆ ನನಗೂ ಗೊತ್ತಿಲ್ಲ. ಅವರು ಯಾವುದೇ ರೀತಿಯ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿಲ್ಲ. ಕೊರೊನಾ ಕಾಣಿಸಿಕೊಂಡ ನಂತರ ಅವರು ನನಗೆ ಸಿಕ್ಕಿಲ್ಲ. ಸಿಸಿಬಿ ಅಧಿಕಾರಿಗಳು ನನ್ನನ್ನೂ ಕರೆಸಿ ವಿಚಾರಣೆ ನಡೆಸಿದ್ದಾರೆ. ಗೊತ್ತಿದ್ದ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಆದಿತ್ಯನ ಸೆಕ್ಯೂರಿಟಿ ಮ್ಯಾನೇಜರ್ ಸ್ಟ್ಯಾನ್ಲಿ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ.