ETV Bharat / city

ಕೇಂದ್ರ ಸರ್ಕಾರ ನನ್ನ ಫೋನ್ ಟ್ಯಾಪ್ ಮಾಡಿದೆ: ದಿನೇಶ್ ಗುಂಡೂರಾವ್ ಆರೋಪ - central government

ಫೋನ್ ಟ್ಯಾಪಿಂಗ್ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆಯೇ ಹೊರತು, ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ನನ್ನ ಫೋನ್ ಅನ್ನು ಟ್ಯಾಪ್ ಮಾಡಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯಿತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ದಿನೇಶ್ ಗುಂಡೂರಾವ್
author img

By

Published : Aug 16, 2019, 8:54 PM IST

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಫೋನ್ ಕದ್ದಾಲಿಕೆ ಸರ್ವೆ ಸಾಮಾನ್ಯವಾಗಿದೆ. ಕೇಂದ್ರ ಸರ್ಕಾರ ನಮ್ಮ ಫೋನ್​ಗಳನ್ನ ಟ್ಯಾಪಿಂಗ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

ಫೋನ್ ಟ್ಯಾಪ್ ಕುರಿತು ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದಿದ್ದ ವಿವಿಧ ಘಟಕಗಳ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಬಗ್ಗೆ ಏಕೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಗೊತ್ತಿಲ್ಲ. ಫೋನ್ ಟ್ಯಾಪಿಂಗ್ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆಯೇ ಹೊರತು, ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ನನ್ನ ಫೋನ್ ಅನ್ನು ಟ್ಯಾಪ್ ಮಾಡಿದೆ. ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯಿತ್ತಿದೆ ಎಂದು ದೂರಿದರು.

ಯಡಿಯೂರಪ್ಪ ಅವರದ್ದು ಒನ್ ಮ್ಯಾನ್ ಶೋ. ಇದುವರೆಗೂ ಮಂತ್ರಿ ಮಂಡಲ ರಚನೆ ಮಾಡಿಲ್ಲ. ಸಿಎಂ ಆಡಳಿತ ನಡೆಸುತ್ತಾ ದೇಶದಲ್ಲೇ ಅವರು ಹೊಸ ದಾಖಲೆ ಸೃಷ್ಟಿಸಿದ್ದಾರೆ. ದೆಹಲಿಗೆ ಹೋದರೂ ಸಂಪುಟ ವಿಸ್ತರಣೆಯ ಅವರ ಉದ್ದೇಶ ಇನ್ನೂ ಈಡೇರಿಲ್ಲ. ಪ್ರವಾಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಯಡಿಯೂರಪ್ಪ ರಾಜ್ಯಕ್ಕೆ ಕರೆದುಕೊಂಡು ಬರಬೇಕಾಗಿತ್ತು. ಮಹಾರಾಷ್ಟ್ರ, ಕೇರಳ ಪ್ರವಾಹಕ್ಕೆ ಹೆಚ್ಚಿನ ಅನುದಾನ ನೀಡಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಇನ್ನೂ ಪರಿಹಾರವನ್ನೇ ಘೋಷಿಸಲಿಲ್ಲ. ಯಡಿಯೂರಪ್ಪ ಸುಮ್ಮನೆ ಹೋಗಿ ಪ್ರಧಾನಿಗಳನ್ನು ಭೇಟಿ ಮಾಡಿ ಬರೋದು ಸರಿಯಲ್ಲ, ಪರಿಹಾರ ಘೋಷಣೆ ಮಾಡಿಸಬೇಕಿತ್ತು ಎಂದು ಟೀಕಿಸಿದರು.

ಕಾಂಗ್ರೆಸ್ ಜಾರಿಗೆ ತಂದ ಯೋಜನೆಗೆ ಬಿಜೆಪಿ ಸರ್ಕಾರ ಹಣಕಾಸಿನ ಕಡಿತ ಮಾಡುತ್ತಿರುವುದು ಸರಿಯಲ್ಲ. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳು ಬಡವರಿಗೆ ತಲುಪಿರುವ ಯೋಜ‌ನೆಗಳು. ಈ ಯೋಜನೆಗಳಿಗೆ ಹಣಕಾಸನ್ನು ಕಡಿತ ಮಾಡುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹಿಳಾ ಘಟಕ, ಒಬಿಸಿ, ಸೇವಾದಳ, ಎನ್​ಎಸ್​ಯುಐ, ಕಾರ್ಮಿಕ ಘಟಕ, ಲೀಗಲ್ ಸೆಲ್​ಗಳ ಮುಖಂಡರ ಸಭೆ ನಡೆಯಿತು. ಈ ವೇಳೆ 17 ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗುವ ಸಾಧ್ಯತೆ ಹಿನ್ನೆಲೆ ಭೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಮುಖಂಡರಿಗೆ ಹಿರಿಯ ನಾಯಕರು ಸಲಹೆ, ಸೂಚನೆ ನೀಡಿದರು.

Intro:ಬೆಂಗಳೂರು : ಟೆಲಿಫೋನ್ ಕದ್ದಾಲಿಕೆ ಸರ್ವೆ ಸಾಮಾನ್ಯವಾಗಿದೆ. ಕೇಂದ್ರ ಸರ್ಕಾರ ನಮ್ಮ ಫೋನ್ ಟ್ಯಾಪಿಂಗ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. Body:ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದಿದ್ದ ವಿವಿಧ ಘಟಕಗಳ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಬಗ್ಗೆ ಏಕೆ ಸಮಯ ವ್ಯರ್ಥ ಮಾಡ್ತಿದ್ದಾರೆ ಗೊತ್ತಿಲ್ಲ. ಫೋನ್ ಟ್ಯಾಪಿಂಗ್ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆಯೇ ಹೊರತು ತನಿಖೆ ನಡೆಸಲು ಅವರದೇ ಸರ್ಕಾರ ಹಿಂದೇಟು ಹಾಕುತ್ತಿದೆ. ಕೇಂದ್ರ ಸರ್ಕಾರ ನನ್ನ ಫೋನ್ ಟ್ಯಾಪ್ ಮಾಡಿದೆ.
ಇಂದಿಗೂ ನಮ್ಮ ಫೋನ್ ಕದ್ದಾಲಿಕೆ ನಡೆಯಿತ್ತಿದೆ ಎಂದು ದೂರಿದರು.
ಹಿಂದೆಯೂ ಫೋನ್ ಟ್ಯಾಪಿಂಗ್ ಆಗಿದೆ. ಫೋನ್ ಕದ್ದಾಲಿಕೆ ಬಗ್ಗೆ ಆರೋಪ ಮಾಡುತ್ತಿರುವುದು ಬಿಜೆಪಿಯವರು. ಸರ್ಕಾರ ಅವರದೇ ಇದೆ. ತನಿಖೆ ಮಾಡಿಸಿ ಕಾನೂನು ಬಾಹಿರವಾಗಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದರು.
ಯಡಿಯೂರಪ್ಪ ಅವರದ್ದು ಒನ್ ಮ್ಯಾನ್ ಶೋ. ಇದುವರೆಗೂ ಮಂತ್ರಿ ಮಂಡಲ ರಚನೆ ಮಾಡಿಲ್ಲ. ಸಿಎಂ ಆಡಳಿತ ನಡೆಸುತ್ತಿರುವುದು ದೇಶದಲ್ಲೇ ಅವರು ಹೊಸ ದಾಖಲೆ ಸೃಷ್ಟಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ದೆಹಲಿಗೆ ಹೋದರೂ ಸಂಪುಟ ವಿಸ್ತರಣೆಯ ಅವರ ಉದ್ದೇಶ ಇನ್ನೂ ಈಡೇರಿಲ್ಲ. ಪ್ರವಾಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಯಡಿಯೂರಪ್ಪ ರಾಜ್ಯಕ್ಕೆ ಕರೆದುಕೊಂಡು ಬರಬೇಕಾಗಿತ್ತು. ಮಹಾರಾಷ್ಟ್ರ, ಕೇರಳ ಪ್ರವಾಹಕ್ಕೆ ಹೆಚ್ಚಿನ ಅನುದಾನ ನೀಡಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಇನ್ನೂ ಪರಿಹಾರವನ್ನೇ ಘೋಷಿಸಲಿಲ್ಲ. ಮೋದಿಯವರು ಭಾಷಣ ಮಾಡುವುದು, ಭಾವನಾತ್ಮಕವಾಗಿ ವಿಚಾರಗಳನ್ನು ಹೇಳಿ ಜನರನ್ನು ತೃಪ್ತಿಪಡಿಸುತ್ತಿದ್ದಾರೆ. ರಾಜ್ಯದ ಮೇಲೆ ಅವರಿಗೆ ಕಾಳಜಿ ಇದಿದ್ದರೆ ಇಂದೇ ಪ್ರಧಾನಿ ಅವರಿಂದ ಪರಿಹಾರ ಘೋಷಣೆ ಮಾಡಿಸಬೇಕಿತ್ತು. ಯಡಿಯೂರಪ್ಪ ಸುಮ್ಮನೆ ಹೋಗಿ ಪ್ರಧಾನಿಗಳನ್ನು ಭೇಟಿ ಮಾಡಿ ಬರೋದು ಸರಿಯಲ್ಲ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಅದು ಬಿಜೆಪಿಯ ಆಂತರಿಕ ವಿಷಯ. ಅದು ನಮಗೆ ಬೇಕಾಗಿಲ್ಲ. ಅವರು ಯಾರಿಗೆ ಯಾವ ಸ್ಥಾನ ಕೊಡುತ್ತಾರೆ ಅನ್ನೋದು ನಮಗೆ ಬೇಕಿಲ್ಲ. ನಮಗೆ ಬೇಕಿರೋದು ರಾಜ್ಯದ ಅಭಿವೃದ್ಧಿ ಮಾತ್ರ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹಕ್ಕೆ ಸೂಕ್ತ ಪರಿಹಾರ ಕೊಡಿಸಲಿ ಅಷ್ಟೇ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಜಾರಿಗೆ ತಂದ ಯೋಜನೆಗೆ ಬಿಜೆಪಿ ಸರ್ಕಾರ ಹಣಕಾಸಿನ ಕಡಿತ ಮಾಡುತ್ತಿರುವುದು ಸರಿಯಲ್ಲ. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳು ಬಡವರಿಗೆ ತಲುಪಿರುವ ಯೋಜ‌ನೆಗಳು. ಈ ಯೋಜನೆಗಳಿಗೆ ಹಣಕಾಸನ್ನು ಕಡಿತ ಮಾಡುವುದನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಇದು ಮುಂದುವರೆದರೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸಭೆ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿವಿಧ ಘಟಕಗಳ ಸಭೆ ನಡೆಯಿತು.
ಮಹಿಳಾ ಘಟಕ, ಒಬಿಸಿ, ಸೇವಾದಳ, ಎನ್ ಎಸ್ ಯುಐ, ಕಾರ್ಮಿಕ ಘಟಕ, ಲೀಗಲ್ ಸೆಲ್ ಗಳ ಮುಖಂಡರ ಸಭೆ ನಡೆಯಿತು. 17 ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಮುಖಂಡರಿಗೆ ಹಿರಿಯ ನಾಯಕರು ಸಲಹೆ, ಸೂಚನೆ ನೀಡಿದ್ದಾರೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.