ETV Bharat / city

ಸಾಕ್ಷ್ಯಾಧಾರ ಸಲ್ಲಿಸಲು ಪಂಚಮಸಾಲಿ ಶ್ರೀಗೆ ಆಯೋಗ ಮನವಿ: ನಿರಾಣಿ, ಸಿ.ಸಿ ಪಾಟೀಲ್ ಸಂತಸ

author img

By

Published : Mar 12, 2021, 10:12 PM IST

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಭಯ ಸಚಿವರು, ಮಾರ್ಚ್ 22 ರಂದು ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ‌ಕೂಡಲಸಂಗಮ ಪೀಠದ ಬಸವ ಜಯಮೃತ್ಯಂಜಯ ಶ್ರೀಗಳು ಹಾಗೂ ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳಿಗೆ ಪತ್ರ ಬರೆದಿರುವುದು ಸಕಾರಾತ್ಮಕ ಬೆಳವಣಿಗೆ ಎಂದು ಬಣ್ಣಿಸಿದ್ದಾರೆ.

ಸಿ.ಸಿ ಪಾಟೀಲ್ ಸಂತಸ
ಸಿ.ಸಿ ಪಾಟೀಲ್ ಸಂತಸ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರ್ಪಡೆ ಮಾಡುವ ಕುರಿತಾಗಿ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗು ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿರುವುದಕ್ಕೆ ಸಚಿವರಾದ ಮುರುಗೇಶ್ ಆರ್.ನಿರಾಣಿ ಹಾಗೂ ಸಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡಿಗಡೆ ಮಾಡಿರುವ ಉಭಯ ಸಚಿವರು, ಮಾರ್ಚ್ 22 ರಂದು ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ‌ಕೂಡಲಸಂಗಮ ಪೀಠದ ಬಸವ ಜಯಮೃತ್ಯಂಜಯ ಶ್ರೀಗಳು ಹಾಗೂ ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳಿಗೆ ಪತ್ರ ಬರೆದಿರುವುದು 'ಸಕಾರಾತ್ಮಕ' ಬೆಳವಣಿಗೆ ಎಂದು ಬಣ್ಣಿಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಪತ್ರ ಬರೆದು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2 ಗೆ ಸೇರ್ಪಡೆ ಮಾಡುವ ಬಗ್ಗೆ ತಮ್ಮಲ್ಲಿ ಯಾವುದೇ ರೀತಿಯ ದಾಖಲೆಗಳಿದ್ದರೆ, ಖುದ್ದು ಹಾಜರಾಗಿ ಇಲ್ಲವೇ ಸಂಬಂಧಿಪಟ್ಟವರ ಮೂಲಕ ಮಾಹಿತಿಯನ್ನು ನೀಡಬಹುದು ಎಂದು ಉಭಯ ಶ್ರೀಗಳಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ. ಆಯೋಗವು ಸಮುದಾಯದ ಬೇಡಿಕೆಗೆ ಸ್ಪಂಧಿಸಿ ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿರುವುದು ಸರಿಯಾದ ಕ್ರಮವಾಗಿದೆ. ಖಂಡಿತವಾಗಿಯೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವನ್ನು ಸಚಿವರುಗಳು ವ್ಯಕ್ತಪಡಿಸಿದ್ದಾರೆ.

KN_BNG_04_NIRANI_CCP_PRESS_STATEMENT_SCRIPT_7208080
ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ

ಸಮುದಾಯದ ಕಲ್ಯಾಣಕ್ಕಾಗಿ ಕೂಡಲಸಂಗಮ ಪೀಠದ ಬಸವಮೃತ್ಯುಂಜಯ ಶ್ರೀಗಳು ಆಹೋರಾತ್ರಿ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಅಧ್ಯಯನ ವರದಿ ನೀಡಲು ಸರ್ಕಾರ ಸೂಚಿಸಿದೆ. ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ ಎಂದು ಗುರುತಿಸಿದವರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಪಂಚಮಸಾಲಿ ಲಿಂಗಾಯತ ಸಮಯದಾಯವನ್ನು 3ಬಿ ಗೆ ಸೇರಿಸಿದ್ದವರು ಎಂದು ಸಚಿವರು ಸ್ಮರಿಸಿದ್ದಾರೆ.

ಸಮುದಾಯದ ಬೇಡಿಕೆಗೆ ಓಗೊಟ್ಟು ಲೋಕಸಭಾ ಸದಸ್ಯರು, ಶಾಸಕರು, ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಈ ಹೋರಾಟಕ್ಕೆ ಶ್ರಮಿಸಿದ್ದಾರೆ. ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇವೆ. ಈಗ 2ಎ ಮೀಸಲಾತಿಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳಿಸಿಕೊಟ್ಟಿದ್ದಾರೆ. ಆಯೋಗದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅದೇ ರೀತಿ ನಮಗೆ ಪ್ರತಿಯೊಂದು ಹಂತದಲ್ಲೂ ಅಗತ್ಯವಾದ ಸಲಹೆ ಸೂಚನೆ ಹಾಗೂ ಮಾರ್ಗದರ್ಶನ ನೀಡಿದ ಬಸವರಾಜ ಬೊಮ್ಮಾಯಿ ಸಹಾಯವನ್ನು ನಮ್ಮ ಸಮುದಾಯ ಎಂದಿಗೂ ಮರೆಯುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಗೃಹ ಸಚಿವ ಬೊಮ್ಮಯಿ ಅವರ ಸಹಕಾರವನ್ನು ಸ್ಮರಿಸಿದ್ದಾರೆ.

ನಿವೃತ್ತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ, ಸರ್ಕಾರದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರತ್ನಪ್ರಭಾ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಕೂಲಂಕಶವಾಗಿ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮಸ್ತ ವೀರಶೈವ- ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಸಿಗಬೇಕು. ಅದರಲ್ಲೂ ಆರ್ಥಿಕವಾಗಿ ತೀರಾ ಹಿಂದುಳಿದ ಹಡಪದ, ಸವಿತಾ ಸಮಾಜದವರು ಸೇರಿದಂತೆ ಧ್ವನಿ ಇಲ್ಲದವರಿಗೆ ಮೀಸಲಾತಿ ಸೌಲಭ್ಯ ಸಿಗಬೇಕು. ವೀರಶೈವ- ಲಿಂಗಾಯತರಿಗೆ ಮೀಸಲಾತಿ ನೀಡುವುದರ ಜೊತೆಗೆ ಯಾರು ವಂಚಿತರಾಗಿದ್ದಾರೋ ಅಂತಹವರಿಗೆ ಮೀಸಲಾತಿ ಸೌಲಭ್ಯ ಸಿಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರ ಇಲ್ಲ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.