ETV Bharat / city

ಸ್ಯಾಂಡಲ್​​​​​ವುಡ್​ ಡ್ರಗ್ಸ್ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

ಸ್ಯಾಂಡಲ್​​ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜಾಮೀನು ಕೋರಿ ರಾಗಿಣಿ ಆಪ್ತ ರವಿಶಂಕರ್, ಆದಿತ್ಯ ಅಗರ್ ವಾಲ್ ಹಾಗೂ ವೀರೇನ್​​ ಖನ್ನಾ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಎನ್​​​ಡಿಪಿಎಸ್ ಸ್ಪೆಷಲ್ ಕೋರ್ಟ್ ಅರ್ಜಿಗಳನ್ನು ವಜಾ ಮಾಡಿತು.

Bangalore City Civil Court
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್
author img

By

Published : Nov 10, 2020, 7:49 PM IST

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನಗರದ ಎನ್​ಡಿಪಿಎಸ್ ವಿಶೇಷ ಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ರಾಗಿಣಿ ಆಪ್ತ ರವಿಶಂಕರ್, ಆದಿತ್ಯ ಅಗರ್ ವಾಲ್ ಹಾಗೂ ವೀರೇನ್​​ ಖನ್ನಾ ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್​​​ಡಿಪಿಎಸ್ ಸ್ಪೆಷಲ್ ಕೋರ್ಟ್ ವಿಚಾರಣೆ ನಡೆಸಿತು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಿ.ಎಂ.ಶೀನಪ್ಪ ಅವರು, ಪ್ರಕರಣ ವಿಚಾರಣೆ ಹಂತದಲ್ಲಿರುವ ಕಾರಣ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟಿ ಮನವಿ ವಜಾಗೊಳಿಸಿದರು.

ಡ್ರಗ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪದಡಿ ಈ ಮೂವರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಷ್ಠಿತ ಜನರಿಗೆ ಪಾರ್ಟಿ ಆಯೋಜಿಸಿ, ಅಲ್ಲಿ ಡ್ರಗ್ಸ್ ಪೂರೈಸುತ್ತಿದ್ದರು ಎಂದು ಪೊಲೀಸರು ಆರೋಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.