ETV Bharat / city

ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ವಿವಿಧ ವಲಯಗಳ ಜನರಿಗೆ ಸಾಲ ವಿತರಣೆ ಮಾಡಲಾಗಿದೆ: ಸಿಎಂ - CM Yeddyurappa News

ರೈತ ಉತ್ಪಾದಕ ಸಂಸ್ಥೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸಲು 4,525 ಕೋಟಿ ರೂ. ಮೊತ್ತವನ್ನು ರಾಜ್ಯಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

Bangalore
ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ
author img

By

Published : Nov 14, 2020, 3:14 PM IST

ಬೆಂಗಳೂರು: ಈಗಾಗಲೇ ಸಹಕಾರ ಇಲಾಖೆಯ ಮೂಲಕ 39,600 ಕೋಟಿ ರೂ.ಗಳನ್ನು ಆರ್ಥಿಕ ಸ್ಪಂದನ ಕಾರ್ಯಕ್ರಮದ ಮೂಲಕ ವಿವಿಧ ವಲಯಗಳ ಜನರಿಗೆ ಸಾಲವಾಗಿ ವಿತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ ಈವರೆಗೆ 15 ಲಕ್ಷಕ್ಕೂ ಹೆಚ್ಚು ರೈತರಿಗೆ 9502.62 ಕೋಟಿ ರೂ.ಗಳ ಬೆಳೆ ಸಾಲವನ್ನು ವಿತರಣೆ ಮಾಡಲಾಗಿದೆ. ರೈತ ಉತ್ಪಾದಕ ಸಂಸ್ಥೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸಲು 4,525 ಕೋಟಿ ರೂ. ಮೊತ್ತವನ್ನು ರಾಜ್ಯಕ್ಕೆ ಹಂಚಿಕೆ ಮಾಡಲಾಗಿದೆ. ಸಹಕಾರ ವ್ಯವಸ್ಥೆಯ ಉಳಿದ ವಲಯಗಳ ಬಲವರ್ಧನೆಗೂ ರಾಜ್ಯ ಸರ್ಕಾರ ಉಪಯುಕ್ತ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್​ಡೌನ್ ನಡುವೆಯೂ ಎಲ್ಲಾ ರೀತಿಯ ಸಹಕಾರ ಸಂಸ್ಥೆಗಳು ಪ್ರಮುಖವಾಗಿ ಕೃಷಿ ಸಾಲ ವಿತರಣೆ, ಹಾಲು ಸಂಗ್ರಹಣೆ ಮತ್ತು ಮಾರಾಟ, ಕೃಷಿ ಉತ್ಪನ್ನಗಳ ಖರೀದಿ ಹಾಗೂ ಕೃಷಿ ಮತ್ತು ಕೃಷಿಯೇತರ ಸಾಲ ಸೌಲಭ್ಯಗಳನ್ನು ಸದಸ್ಯರಿಗೆ ಕಲ್ಪಿಸಲಾಗಿದೆ. ಬಡ್ಡಿ ಸಹಾಯಧನಕ್ಕಾಗಿ ಈಗಾಗಲೇ 496.24 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಕೋವಿಡ್ ನಿರ್ವಹಣೆಯಲ್ಲಿ ಸಿಎಂ ಪಾತ್ರ ದೊಡ್ಡದು:

ಕೋವಿಡ್-19 ಬಂದ ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ರಾಜ್ಯದಲ್ಲಿ ಆರೋಗ್ಯದ ದೃಷ್ಟಿಯಿಂದ ಬೇಕಾದ ಕ್ರಮಗಳನ್ನು ತೆಗೆದುಕೊಂಡು ಕೊರೊನಾ ನಿಯಂತ್ರಣ ಮಾಡುವಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕೋವಿಡ್ ಸಂದರ್ಭ ಎದುರಾದ ಹಿನ್ನೆಲೆಯಲ್ಲಿ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಸಾಲ ನೀಡುವುದು ಬಹಳ ಕಷ್ಟ ಎಂದೇ ಅಂದಾಜಿಸಲಾಗಿತ್ತು. ಕಳೆದ ವರ್ಷ ನೀಡಲಾಗಿದ್ದ 13,500 ಕೋಟಿಯಷ್ಟು ಸಾಲವನ್ನೂ ಸಹ ನೀಡಲು ಕಷ್ಟವಾಗಬಹುದು ಎಂಬ ಆತಂಕದ ನಡುವೆಯೂ ನಾವು 24 ಲಕ್ಷ ರೈತರಿಗೆ 14,500 ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹಾಕಿಕೊಂಡೆವು. ಅದರನ್ವಯ ಈವರೆಗೆ ಅಂದರೆ ನವೆಂಬರ್ 14ರವರೆಗೆ 15,22,076 ರೈತರಿಗೆ 9945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ ಎಂದು ತಿಳಿಸಿದರು.

ಸಹಕಾರ ರತ್ನ ಪ್ರಶಸ್ತಿ ಪ್ರದಾನ:

ಸಹಕಾರ ಕ್ಷೇತ್ರದಲ್ಲಿನ 10 ಮಂದಿ ಸಾಧಕರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ‌ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಎಸ್.ಆರ್.ಪಾಟೀಲ್, ಷಡಾಕ್ಷರಿ, ಸತೀಶ್ಚಂದ್ರ, ಚಿದಂಬರ, ಎಸ್.ಎಸ್.ಪಾಟೀಲ, ಮಾತಂಡ ರಮೇಶ, ಮೀನಾಕ್ಷಿ ಕಲ್ಲೂರ, ಉಮಾಕಾಂತ ನಾಗಮಾರಪಳ್ಳಿ, ಕೆ.ಪಿ.ಬಚ್ಚೇಗೌಡಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಹಕಾರ ರತ್ನ ಪುರಸ್ಕೃತ ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಗೈರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.