ETV Bharat / city

ಸುಗಮ ಕಲಾಪ ನಡೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ - ಸುಗಮ ಕಲಾಪ ನಡೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಉಭಯ ಸದನಗಳ ಕಲಾಪಗಳು ಹಾಳಾಗುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷವು ಪ್ರತಿಭಟನೆ ನಡೆಸಿದೆ. ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಸ್ವಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಸದನವನ್ನು ಹಾಳು ಮಾಡುತ್ತಿರುವುದಾಗಿ ಜೆಡಿಎಸ್ ದೂರಿದೆ. ಈ ಕೂಡಲೇ ಎರಡೂ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಿ ಸದನಗಳಲ್ಲಿ ಕಲಾಪಗಳು ಸುಗಮವಾಗಿ ನಡೆಯಲು ಸಹಕರಿಸುವಂತೆ ಒತ್ತಾಯಿಸಿದೆ..

the-jds-party-protest-ensure-proper-functioning-of-the-legislative-bodies
ಸುಗಮ ಕಲಾಪ ನಡೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
author img

By

Published : Feb 21, 2022, 2:17 PM IST

ಬೆಂಗಳೂರು : ವಿಧಾನಮಂಡಲ ಉಭಯ ಸದನಗಳ ಕಲಾಪ ಸಮರ್ಪಕವಾಗಿ ನಡೆಯುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್ ಪಕ್ಷ ಇಂದು ಪ್ರತಿಭಟನೆ ನಡೆಸಿತು.

ಜೆಡಿಎಸ್‌ನ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯಭಾಗದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಜೆಡಿಎಸ್​ನ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿಭಟಿಸಿದರು.

ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್, ಕಾಂಗ್ರೆಸ್‌ನ ಪ್ರತಿಭಟನೆಯನ್ನು ತಡೆಯದೆ ಬಿಜೆಪಿ ಕಲಾಪವನ್ನು ಹಾಳು ಮಾಡುತ್ತಿವೆ ಎಂದು ಹೇಳಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಸದನದ ಸಮಯವನ್ನು ಹಾಳು ಮಾಡುತ್ತಿದ್ದು, ಅತ್ಯಂತ ಪ್ರಮುಖ ಚರ್ಚೆಗೆ ವೇದಿಕೆಯಾಗಬೇಕಾದ ಸದನಗಳ ಕಲಾಪಗಳು ಸಮರ್ಪಕವಾಗಿ ನಡೆಯುತ್ತಿಲ್ಲ.

ರಾಜ್ಯ ಸರ್ಕಾರ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮಾತುಕತೆ ನಡೆಸಿ ಮನವೊಲಿಸಬೇಕು ಇಲ್ಲವೇ ಹೊರ ಹಾಕುವ ತೀರ್ಮಾನ ಕೈಗೊಳ್ಳಬೇಕು. ಅತ್ಯಂತ ಮಹತ್ವದ ಚರ್ಚೆಗಳು ಹಾಗೂ ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಆಗಬೇಕಿದೆ. ಇದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಪ್ರತಿಷ್ಠೆಯನ್ನು ಮುಂದಿಟ್ಟು ಸದನವನ್ನು ಹಾಳುಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಗಮ ಕಲಾಪ ನಡೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಪ್ರತಿಭಟನೆಯಲ್ಲಿ ಹೆಚ್.ಕೆ .ಕುಮಾರಸ್ವಾಮಿ ಮಾತನಾಡಿ, ಜನರ ಸಮಸ್ಯೆಗಳನ್ನು ಚರ್ಚೆ ಮಾಡಲು ರಾಷ್ಟ್ರೀಯ ಪಕ್ಷಗಳಿಗೆ ಆಸಕ್ತಿ ಇಲ್ಲ. ಬೆಳಗಾವಿಯಲ್ಲಿಯೂ ಸದನ ಸರಿಯಾಗಿ ನಡೆಸಲಿಲ್ಲ. ಜನರ ಹಣ ವೃಥಾ ಪೋಲಾಗುತ್ತಾ ಇದೆ. ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ.

ಇಂದು ಕಾಂಗ್ರೆಸ್‌ಗೆ ಹಿಜಾಬ್ ವಿವಾದದಿಂದ ಹಿನ್ನಡೆ ಆಗಿದೆ. ಇದನ್ನು ಮರೆಸಲು ಸಚಿವ ಈಶ್ವರಪ್ಪ ಹೇಳಿಕೆ ವಿಚಾರ ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿದೆ. ಕೇವಲ ಕಾಲಹರಣ ಮಾಡುವುದಷ್ಟೇ ಇವರುಗಳ ಉದ್ದೇಶ. ಜೆಡಿಎಸ್ ಪಕ್ಷ ಕಲಾಪದಲ್ಲಿ ಭಾಗವಹಿಸಲು ಸಿದ್ಧವಾಗಿದ್ದರೂ ಅವಕಾಶ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಮಾತನಾಡಿ, ಇಂದು ಕಾಂಗ್ರೆಸ್ ಪಕ್ಷ ಹೋರಾಟ ನಡೆಸುತ್ತಿದೆ. ಪ್ರತಿಪಕ್ಷಗಳ ಮನವೊಲಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು. ಸದನವನ್ನು ಸುಗಮವಾಗಿ ನಡೆಸಬೇಕು. ನಮ್ಮ ಪಕ್ಷದಿಂದ ನಾವು ಸಭಾಧ್ಯಕ್ಷರಿಗೆ ಹಾಗೂ ಸಭಾಪತಿಗಳಿಗೆ ಇಬ್ಬರಿಗೂ ಮನವಿ ಮಾಡುತ್ತಿದ್ದೇವೆ.

ಸರ್ಕಾರಕ್ಕೂ ಸಹ ಮನವಿ ಮಾಡುತ್ತಿದ್ದು ಹೇಗಾದರೂ ಮಾಡಿ ಕಾಂಗ್ರೆಸ್ ಹೋರಾಟವನ್ನು ನಿಲ್ಲಿಸಿ. ಎರಡು ರಾಷ್ಟ್ರೀಯ ಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂಬ ಅನುಮಾನ ಇದೆ. ರಾಜ್ಯಪಾಲರ ಭಾಷಣ ಸೇರಿದಂತೆ ವಿವಿಧ ವಿಚಾರಗಳ ಮೇಲೆ ಚರ್ಚೆ ನಡೆಯಬೇಕಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ಎರಡೂ ಸದನ ನಡೆಸುವ ವಿಚಾರದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು.

ಹೇಗಾದರೂ ಸದನವನ್ನು ನಡೆಸಿ ಎಂದು ಒತ್ತಾಯಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಶಾಸಕರಾದ ನಾಡಗೌಡ, ಸಿ ಎಸ್ ಪುಟ್ಟರಾಜು, ಅನ್ನದಾನಿ, ಪರಿಷತ್ತು ಸದಸ್ಯರಾದ ಬೋಜೇಗೌಡ, ತಿಪ್ಪೇಸ್ವಾಮಿ, ಗೋವಿಂದರಾಜು ಸೇರಿದಂತೆ ಇತರೆ ಜೆಡಿಎಸ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಓದಿ: Watch: ಭಜರಂಗದಳದ ಕಾರ್ಯಕರ್ತನ ಮೃತದೇಹ ಮೆರವಣಿಗೆ - ಬಿಗಿ ಪೊಲೀಸ್​ ಬಂದೋಬಸ್ತ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.