ದೇವನಹಳ್ಳಿ : ಇದೇ ಮೊದಲ ಬಾರಿಗೆ ಆಕ್ಟೋಬರ್ 30 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಪ್ರಯಾಣಿಕರ ವಿಮಾನ 'ಏರ್ ಬಸ್ A 380' ಲ್ಯಾಂಡ್ ಆಗಲಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಏರ್ ಬಸ್ ಭೂಸ್ವರ್ಶ ಮಾಡಲಿದೆ.
ಎಮಿರೇಟ್ಸ್ ಏರ್ ಲೈನ್ಸ್ ವಿಮಾನಯಾನ ಸಂಸ್ಥೆಯು ದುಬೈ - ಬೆಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭಿಸಿದೆ. ಇದರ ಫಲವಾಗಿ ದುಬೈ- ಬೆಂಗಳೂರು ನಡುವೆ ಅತಿ ದೊಡ್ಡ ಪ್ರಯಾಣಿಕರ ವಿಮಾನ ಏರ್ ಬಸ್ A 380 ಸಂಚಾರ ನಡೆಸಲಿದೆ. ದುಬೈನಿಂದ ಟೇಕ್ ಆಫ್ ಆದ ಏರ್ ಬಸ್ ಆಕ್ಟೋಬರ್ 30 ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.
ಏರ್ ಬಸ್ A 380ಯ ಬಿಸಿನೆಸ್ ಕ್ಲಾಸ್, ಫಸ್ಟ್ ಕ್ಲಾಸ್ನಲ್ಲಿ ಪ್ರೀಮಿಯಂ ಕ್ಯಾಬಿನ್ ಸೇವೆ ನೀಡಲಾಗಿದೆ. ಎಕಾನಮಿ ಕ್ಲಾಸ್ನಲ್ಲಿ ಪ್ರಯಾಣಿಕರಿಗೆ ಸೀಟ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಶ್ರೀಲಂಕಾ ವಾಯುಪಡೆಗೆ ಡಾರ್ನಿಯರ್ ವಿಮಾನ ಗಿಫ್ಟ್ ನೀಡಿದ ಭಾರತ