ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ.
ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. ಈ ಬಗ್ಗೆ ರಮೇಶ್ ಚಂದ್ ಕೆಎಸ್ಆರ್ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಶೋಧ ನಡೆಸಿದಾಗ ಗೃಹ ರಕ್ಷಕದಳದ ಸಿಬ್ಬಂದಿ ಗುರುರಾಜ್ ಗೆ ಸೂಟ್ ಕೇಸ್ ದೊರೆತಿದ್ದು, ಅದನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
ಓದಿ : ಜೆಜೆ ನಗರ ವ್ಯಾಪ್ತಿಯಲ್ಲಿ ಯುವಕನ ಹತ್ಯೆ: ಗೃಹ ಸಚಿವ, ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ದೂರು