ದೇವನಹಳ್ಳಿ : ಕರ್ನಾಟಕದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಜ್ಯಪಾಲರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅವರನ್ನ ಕಂದಾಯ ಸಚಿವ ಆರ್. ಅಶೋಕ್ ಸ್ವಾಗತಿಸಿದರು. ನಂತರ ಕೆಐಎಎಲ್‌ನಿಂದ ನೇರವಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.