ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಅಂಗಡಿಯೊಂದರಲ್ಲಿ ನಿಗದಿತ ಬೆಲೆಗಿಂತ ದುಪ್ಪಟ್ಟು ಬೆಲೆಯಲ್ಲಿ ದಿನಸಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಂದಿದ್ದನ್ನ ಆಧರಿಸಿ ದಾಳಿ ಮಾಡಿದ್ದಾರೆ.
ಅಂಗಡಿಯಲ್ಲಿ 35 ರೂಪಾಯಿ ಸಕ್ಕರೆಗೆ 55 ರೂ. ಬದಲು 72 ರೂ., ಅಡುಗೆ ಎಣ್ಣೆಗೆ 110 ರೂಪಾಯಿ ಹೀಗೆ ವಿವಿಧ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ಹಾಗೂ ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಂಗಡಿ ಮುಚ್ಚಿಸಿದ್ದಾರೆ.