ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆತ್ಮಹತ್ಯೆಗೆ ಶರಣಾಗಿರುವ ಐವರು ರೈತರ ಕುಟುಂಬಕ್ಕೆ ಟ್ವೀಟ್ನಲ್ಲಿ ಮಾಜಿ ಸಿಎಂ ಸಂತಾಪ ಸೂಚಿಸಿದ್ದಾರೆ. ರೈತರ ಸಾವಿಗೆ ಕೇಂದ್ರ ಸರ್ಕಾರವನ್ನು ಹೊಣೆಯಾಗಿಸಿದ್ದು, ಪರಿಹಾರ ನೀಡಿಕೆ ವಿಚಾರದಲ್ಲಿ ವಿಳಂಬ ಧೋರಣೆ ತಾಳುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಅತಿವೃಷ್ಟಿಯಿಂದ ಮನೆ, ತೋಟ, ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿದೆ. ಅತಿವೃಷ್ಟಿ ಪೀಡಿತ ರೈತರ ಬ್ಯಾಂಕ್ಗಳಲ್ಲಿನ ಸಾಲ ಬಾಕಿಗಾಗಿ ನೋಟಿಸ್ ಜಾರಿ ಮಾಡಿ ಕಿರುಕುಳು ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರು ಮಾನವೀಯತೆ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ 36 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ವಿವರಿಸಿದ್ದಾರೆ.
ಈಗಿನ ಪ್ರಧಾನಿ ಎಲ್ಲಿದ್ದಾರೆ?
2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ವೇಳೆ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ, ಸಮೀಕ್ಷೆ ನಡೆಸಿ ತಕ್ಷಣ 1500 ಕೋಟಿ ರೂ. ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ?, ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಗಂಟೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಕುಟುಕಿದ್ದಾರೆ.
-
ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು.#WakeUpBJP
— Siddaramaiah (@siddaramaiah) September 15, 2019 " class="align-text-top noRightClick twitterSection" data="
7/8
">ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು.#WakeUpBJP
— Siddaramaiah (@siddaramaiah) September 15, 2019
7/8ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು.#WakeUpBJP
— Siddaramaiah (@siddaramaiah) September 15, 2019
7/8
ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದು ಟ್ವೀಟ್ಲ್ಲಿ ತಿಳಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದ್ದು, ಇದು ನಿಜವಲ್ಲದಿದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದಿದ್ದಾರೆ.